Advertisement

ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಪ್ರತಿಭಟನೆ

02:24 PM Feb 21, 2022 | Team Udayavani |

ಗದಗ: ಕೆಂಪು ಕೋಟೆ ಮೇಲೆ ಕೇಸರಿ ಬಾವುಟ ಹಾರಿಸುತ್ತೇವೆ ಎಂದು ಹೇಳಿಕೆ ನೀಡಿರುವ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ‌ ನಡೆಸಿದರು.

Advertisement

ನಗರದ‌ ಮಹಾತ್ಮ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ  ವಿರುದ್ಧ ಧಿಕ್ಕಾರ ಕೂಗಿದರು.

ದೇಶದ ಸಾರ್ವಭೌಮತ್ವಕ್ಕೆ ವಿರುದ್ಧವಾಗಿ ಮಾತನಾಡಿದ್ದಾರೆ. ಸಚಿವರ ಹೇಳಿಕೆಯನ್ನು ಖಂಡಿಸಿ ಸದನದಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರ ಬಗ್ಗೆಯೂ ಈಶ್ವರಪ್ಪ ಅವಹೇಳನಕಾರಿಯಾಗಿ ಏಕ ವಚನದಲ್ಲಿ ಮಾತನಾಡಿದ್ದಾರೆ ಎಂದು ಪ್ರತಿಭಟನಾಕಾರರು ಘೋಷಣೆ‌‌ ಕೂಗಿ, ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:ಶಿವಮೊಗ್ಗ ಹರ್ಷ ಹತ್ಯೆ ಕೇಸ್: ಇಬ್ಬರು ಆರೋಪಿಗಳು ವಶಕ್ಕೆ; ಎಡಿಜಿಪಿ ಮುರುಗನ್

ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವ ಕೆ.ಎಸ್.ಈಶ್ವರಪ್ಪ ಅವರನ್ನು ತಕ್ಷಣ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಪ್ರತಿಭಟನಾಕರರು ಆಗ್ರಹಿಸಿದರು.

Advertisement

ಬಳಿಕ ತಹಶಿಲ್ದಾರರ ಕಚೇರಿಗೆ ತೆರೆಳಿ, ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next