ಬೆಂಗಳೂರು: ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಇಡಿ ವಿಚಾರಣೆ ವಿರೋಧಿಸಿ ರಾಜ್ಯ ಕಾಂಗ್ರೆಸ್ ಪಕ್ಷದ ಮುಖಂಡರು ಲಾಲ್ ಬಾಗ್ ನಿಂದ ಶಾಂತಿ ನಗರದಲ್ಲಿರುವ ಇಡಿ ಕಚೇರಿವರೆಗೂ ಪ್ರತಿಭಟನೆ ನಡೆಸಿ ಭಾರಿ ಆಕ್ಷೇಪ ವ್ಯಕ್ತಪಡಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್, ಪರಮೇಶ್ವರ್, ಉಗ್ರಪ್ಪ, ಮಹಾದೇವ ಪ್ರಸಾದ್, ಎಂ.ಬಿ.ಪಾಟೀಲ, ಸಲೀಂ ಅಹಮದ್, ಜಮೀರ್ ಅಹಮದ್, ಆರ್.ವಿ.ದೇಶಪಾಂಡೆ, ಈಶ್ವರ್ ಖಂಡ್ರೆ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.
ಇದನ್ನೂ ಓದಿ:ಗಾಯಕ ಮೂಸೆವಾಲಾ ಕೊಲೆ ಪ್ರಕರಣ; ಪುಣೆ ಪೊಲೀಸರಿಂದ ಶೂಟರ್ ಜಾಧವ್ ಬಂಧನ
ಈ ವೇಳೆ ಮಾತಾನಾಡಿದ ಕಾಂಗ್ರೆಸ್ ಮುಖಂಡರು, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಇಡಿ ಮೂಲಕ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಸಿಬಿಐ, ಐಟಿ ಕೇಂದ್ರ ಸರ್ಕಾರದ ಕೈಗೊಂಬೆ ಆಗಬಾರದು. ಇಡೀ ಸಂವಿಧಾನವನ್ನು ಬುಡಮೇಲೆ ಮಾಡುವ ಕೆಲಸದಲ್ಲಿ ಬಿಜೆಪಿ ಮುಖಂಡರು ಮಾಡುತ್ತಿದ್ದಾರೆ ಎಂದು ದೂರಿದರು. ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.