ನವದೆಹಲಿ: ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಚರ್ಚೆ ನಡೆಸಲು ಅವಕಾಶ ನೀಡಬೇಕೆಂದು ಪಟ್ಟು ಹಿಡಿದು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕಾಂಗ್ರೆಸ್ ರಾಜ್ಯಸಭೆ ಸದಸ್ಯೆ ಫುಲೋ ದೇವಿ ನೇತಾಮ್ ಮೂರ್ಛೆ ಹೋದ ಘಟನೆ ಶುಕ್ರವಾರ (ಜೂನ್ 28) ನಡೆದಿದೆ.
ಇದನ್ನೂ ಓದಿ:Jharkhand; ಸಂಚು ರೂಪಿಸಿರುವುದು ಇಡೀ ದೇಶಕ್ಕೆ ಸಂದೇಶ: ಹೇಮಂತ್ ಸೊರೇನ್
ನೆಲದ ಮೇಲೆ ಬಿದ್ದಿದ್ದ ನೇತಾಮ್ ಅವರನ್ನು ತಕ್ಷಣವೇ ಆಂಬುಲೆನ್ಸ್ ನಲ್ಲಿ ರಾಮ್ ಮನೋಹರ ಲೋಹಿಯಾ ಆಸ್ಪತ್ರೆಗೆ ದಾಖಲಿಸಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿರುವುದಾಗಿ ವೈದ್ಯರು ತಿಳಿಸಿರುವುದಾಗಿ ವರದಿ ವಿವರಿಸಿದೆ.
ನೀಟ್ ಪರೀಕ್ಷೆಯಲ್ಲಿನ ಅಕ್ರಮದ ಕುರಿತು ಚರ್ಚಿಸಲು ಅವಕಾಶ ನೀಡಬೇಕೆಂದು ಇಂಡಿಯಾ ಬ್ಲಾಕ್ ಮೈತ್ರಿಯ ವಿಪಕ್ಷಗಳು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪಟ್ಟುಹಿಡಿದು ಪ್ರತಿಭಟನೆ ನಡೆಸಿದ್ದವು.
ರಾಜ್ಯಸಭೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆಯಲ್ಲಿ ನೇತಾಮ್ ಮೂರ್ಛೆ ಹೋಗಿದ್ದರು. ಲೋಕಸಭೆಯಲ್ಲಿ ವಿಪಕ್ಷ ಸದಸ್ಯರ ಪ್ರತಿಭಟನೆ, ಕೋಲಾಹಲ ಮುಂದುವರಿದ ಹಿನ್ನೆಲೆಯಲ್ಲಿ ಸ್ಪೀಕರ್ ಕಲಾಪವನ್ನು ಸೋಮವಾರದವರೆಗೆ ಮುಂದೂಡಿರುವುದಾಗಿ ತಿಳಿಸಿದ್ದರು.