ಬೆಂಗಳೂರು: ರಾಜ್ಯ ವಿಧಾನಸಭೆ ನೂತನ ಸಭಾಧ್ಯಕ್ಷರಾಗಿ ಕಾಂಗ್ರೆಸ್‌ನ ಶ್ರೀನಿವಾಸಪುರ ಶಾಸಕ ರಮೇಶ್‌ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ್ದ ಸುರೇಶ್‌ಕುಮಾರ್ ಕೊನೇ ಕ್ಷಣದಲ್ಲಿ ಕಣದಿಂದ ಹಿಂದೆ ಸರಿದ ಪರಿಣಾಮ ರಮೇಶ್‌ಕುಮಾರ್ ಸರ್ವಾನುಮತದಿಂದ ಆಯ್ಕೆಯಾದರು.
ಶುಕ್ರವಾರ ವಿಧಾನಸಭೆಯಲ್ಲಿ ಹಂಗಾಮಿ ಸ್ಪೀಕರ್ ಕೆ.ಜೆ.ಬೋಪಯ್ಯ ಅವರು ಸ್ಪೀಕರ್ ಆಯ್ಕೆ ಪ್ರಕ್ರಿಯೆ ಪ್ರಾರಂಭಿಸಿದಾಗ ಸುರೇಶ್ ಕುಮಾರ್ ಅವರ ನಾಮಪತ್ರಕ್ಕೆ ಸೂಚಕರಾಗಿದ್ದ ಸುನಿಲ್ ಕುಮಾರ್ ಸದನದಲ್ಲಿ ಸ್ಪೀಕರ್ ಹುದ್ದೆಗೆ ಸುರೇಶ್ ಕುಮಾರ್ ಹೆಸರನ್ನು ಸೂಚಿಸುವುದಿಲ್ಲ ಎಂದು ಹೇಳಿದರು. ಸುರೇಶ್‌ಕುಮಾರ್ ಅದಕ್ಕೆ ಸಹಮತ ವ್ಯಕ್ತಪಡಿಸಿದರು. ನಂತರ ಕೆ.ಜಿ. ಬೊಪಯ್ಯ ಅವರು ರಮೇಶ್ ಕುಮಾರ್ ಅವರ ಹೆಸರನ್ನು ಸ್ಪೀಕರ್ ಹುದ್ದೆಗೆ ಪ್ರಸ್ತಾಪಿಸಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಮೇಶ್ ಕುಮಾರ್ ಅವರ ಹೆಸರನ್ನು ಸೂಚಿಸಿದರು.ಉಪ ಮುಖ್ಯಮಂತ್ರಿ ಪರಮೇಶ್ವರ್ ಅನುಮೋದಿಸಿದರು.
ರಮೇಶ್‌ಕುಮಾರ್ ಬಗ್ಗೆ ಸಿಎಂ ಕುಮಾರಸ್ವಾಮಿ, ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ನಾನಾ ನಾಯಕರು ಮಾತನಾಡಿದರು.