Advertisement

ರಾಜ್ಯ ಸರಕಾರದ ವಿರುದ್ಧ ಹೋರಾಟಕ್ಕೆ ಕಾಂಗ್ರೆಸ್‌ ಸಿದ್ಧ

11:49 PM Jul 09, 2020 | Sriram |

ಬೆಂಗಳೂರು: ಲಾಕ್‌ಡೌನ್‌ ಸಮಯದಲ್ಲಿ ಸರಕಾರಕ್ಕೆ ಬೆಂಬಲವಾಗಿ ನಿಂತಿದ್ದ ಕಾಂಗ್ರೆಸ್‌ ಈಗ ವೈದ್ಯಕೀಯ ಉಪಕರಣಗಳ ಖರೀದಿ ಹಗರಣವನ್ನು ಮುಂದಿಟ್ಟುರಾಜ್ಯ ಸರಕಾರದ ವಿರುದ್ಧ ಆಂದೋಲನ ರೂಪಿಸಲು ತೀರ್ಮಾನಿಸಿದೆ.

Advertisement

ಗುರುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿ. ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್ ಟಾಸ್ಕ್ ಫೋರ್ಸ್‌ ಸಮಿತಿ ಸಭೆಯಲ್ಲಿ ಈ ನಿರ್ಧಾರ ತಳೆಯಲಾಯಿತು. ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರದ ಬಗ್ಗೆ ದಾಖಲೆ ಸಂಗ್ರಹಿಸಿ, ರಾಜ್ಯ ಸರಕಾರದ ವಿರುದ್ಧ ನಿರಂತರ ಹೋರಾಟ ರೂಪಿಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

ರಾಜ್ಯ ಸರಕಾರವು ಕೋವಿಡ್ ನಿಯಂತ್ರಿಸಲು ಕೈಗೊಂಡ ಕ್ರಮಗಳ ಕುರಿತು ಹೈಕೋರ್ಟ್‌ಗೆ ಸಲ್ಲಿ ಸಿರುವ ಅಫಿದವಿತ್‌ ಮಾಹಿತಿ ಪಡೆದು ಕೊಂಡಿರುವ ಕಾಂಗ್ರೆಸ್‌ ನಾಯಕರು ಸಾರ್ವ ಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷ ಎಚ್‌.ಕೆ. ಪಾಟೀಲ್‌ ಅವ ರನ್ನೂ ಕರೆಯಿಸಿ ಸಮಾಲೋಚನೆ ನಡೆಸಿದ್ದಾರೆ. ಎಚ್‌.ಕೆ. ಪಾಟೀಲ್‌ ಕೂಡ ಅವ್ಯವಹಾರದ ಕುರಿತು ತಮ್ಮ ಗಮನಕ್ಕೆ ಬಂದಿರುವ ಮಾಹಿತಿಯನ್ನು ಕೆಪಿಸಿಸಿ ಟಾಸ್ಕ್ ಫೋರ್ಸ್‌ ಸಮಿತಿಗೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

 

Advertisement

Udayavani is now on Telegram. Click here to join our channel and stay updated with the latest news.

Next