Advertisement
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಜಾತ್ಯತೀತ ಶಕ್ತಿಗಳು ಬಲಗೊಳ್ಳುತ್ತಿವೆ ಎಂಬುದಕ್ಕೆ ರಾಹುಲ್ ಗಾಂಧಿ ಕಾರ್ಯಕ್ರಮ ಉದಾಹರಣೆಯಾಗಿದೆ. ಜನಾಶೀರ್ವಾದ ಯಾತ್ರೆಯ ನಿರೀಕ್ಷೆಗೂ ಮೀರಿದ ಯಶಸ್ಸು ಜಿಲ್ಲೆಯಲ್ಲಿ ಕಾಂಗ್ರೆಸ್ ಬಲವರ್ಧನೆಯ ಪ್ರದರ್ಶನ ಎಂದರು. ಜಿಲ್ಲೆಯಲ್ಲಿ ಕಾಂಗ್ರೆಸ್ ಬಲವರ್ಧನೆಯ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಮನೆಮನೆ ಭೇಟಿ, ಬೂತ್ ಸಮಿತಿ ರಚನೆ ಸೇರಿದಂತೆ ಹಮ್ಮಿಕೊಂಡಿರುವ ಅನೇಕ ಕ್ರಮಗಳು ಕಾಂಗ್ರೆಸ್ ನೆಲೆಯನ್ನು ಭದ್ರಪಡಿಸಿವೆ. ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿದ್ದಾರೆ. ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಚುನಾವಣೆ ಸಂದರ್ಭದಲ್ಲಿ ನೀಡಿರುವ ಎಲ್ಲ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದೆ. ದ.ಕ. ಜಿಲ್ಲೆಯಲ್ಲಿ ಯಾವುದೇ ಭಾಗಕ್ಕೆ ಹೋದರೂ ಅಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಆಗಿರುವುದು ಗೋಚರಿಸುತ್ತಿದೆ ಎಂದವರು ವಿವರಿಸಿದರು.
Related Articles
Advertisement
ಜನ ಲೆಕ್ಕ ಕೇಳುತ್ತಿದ್ದಾರೆಪ್ರಧಾನಿ ನರೇಂದ್ರ ಮೋದಿ ಅವರು ಲೆಕ್ಕ ಕೊಡುವಂತೆ ರಾಜ್ಯ ಸರಕಾರವನ್ನು ಕೇಳುತ್ತಿದ್ದಾರೆ. ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಚುನಾವಣೆ ಸಂದರ್ಭದಲ್ಲಿ ನೀಡಿರುವ ಎಲ್ಲ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದೆ. ಆದರೆ ಕೇಂದ್ರ ಸರಕಾರ ಚುನಾವಣೆ ಸಂದರ್ಭದಲ್ಲಿ ನೀಡಿರುವ ಯಾವುದೇ ಭರವಸೆಗಳನ್ನು ಈಡೇರಿಸದೆ ನುಡಿದಂತೆ ನಡೆಯದ ಸರಕಾರ ಎನಿಸಿಕೊಂಡಿದೆ. ನರೇಂದ್ರ ಮೋದಿಯವರು ನೀಡಿರುವ ಭರವಸೆಗಳಲ್ಲಿ ಎಷ್ಟು ಈಡೇರಿಸಿದ್ದಾರೆ ಎಂಬುದಾಗಿ ಜನ ಇದೀಗ ಲೆಕ್ಕ ಕೇಳುತ್ತಿದ್ದು, ಇದಕ್ಕೆ ಅವರು ಉತ್ತರಿಸಲಿ ಎಂದು ಸಚಿವ ರೈ ಸವಾಲೆಸೆದರು. ರಾಜ್ಯದಲ್ಲಿ ಸಿದ್ದರಾಮಯ್ಯ ಅವರೇ ಕಾಂಗ್ರೆಸ್ ಪಕ್ಷದ ತಾರಾ ಪ್ರಚಾರಕರು ಎಂದವರು ಹೇಳಿದರು.