Advertisement

ಗುಜರಾತ್‌ನ ಕಾಂಗ್ರೆಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ

09:18 PM Nov 15, 2022 | Team Udayavani |

ಅಹಮದಾಬಾದ್‌: ಮುಂಬರುವ ಗುಜರಾತ್‌ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ತನ್ನ ಪಕ್ಷದ ಸ್ಟಾರ್‌ ಪ್ರಚಾರಕರ ಪಟ್ಟಿಯನ್ನು ಮಂಗಳವಾರ ಬಿಡುಗಡೆಗೊಳಿಸಿದೆ.

Advertisement

ಆದರೆ ಶಶಿ ತರೂರ್‌, ಆನಂದ ಶರ್ಮ, ಮನೀಶ್‌ ತಿವಾರಿ, ರಣದೀಪ್‌ ಸಿಂಗ್‌ ಸುಜೇìವಾಲಾ ಸೇರಿದಂತೆ ಕಾಂಗ್ರೆಸ್‌ನ ಕೆಲವು ಹಿರಿಯ ನಾಯಕರ ಹೆಸರುಗಳನ್ನು ಪಟ್ಟಿಯಿಂದ ಹೊರಗಿಡಲಾಗಿದೆ.

ಶಶಿ ತರೂರ್‌, ಆನಂದ ಶರ್ಮ, ಮನೀಶ್‌ ತಿವಾರಿ ಅವರು ಜಿ-23 ಗುಂಪಿನಲ್ಲಿ ಕಾಣಿಸಿಕೊಂಡಿದ್ದರು. ಅಲ್ಲದೇ ಪಕ್ಷದ ಸಂಘಟನಾತ್ಮಕ ಬದಲಾವಣೆ ಹಾಗೂ ಪೂರ್ಣ ಪ್ರಮಾಣದ ಅಧ್ಯಕ್ಷರ ಆಯ್ಕೆಗೆ ಆಗ್ರಹಿಸಿ ಪತ್ರ ಬರೆದಿದ್ದರು. ಅಲ್ಲದೇ ಇತ್ತೀಚೆಗೆ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಶಶಿ ತರೂರ್‌ ಸ್ಪರ್ಧಿಸಿ, ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಪರಾಭವಗೊಂಡಿದ್ದರು.

ಇಬ್ಬರು ಕನ್ನಡಿಗರಿಗೆ ಸ್ಥಾನ:
ಕನ್ನಡಿಗರಾದ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿ.ಕೆ.ಹರಿಪ್ರಸಾದ್‌ ಅವರಿಗೆ ಕಾಂಗ್ರೆಸ್‌ ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ಸಿಕ್ಕಿದೆ. ಇವರಲ್ಲದೇ, ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ರಾಜಸ್ಥಾನ ಸಿಎಂ ಅಶೋಕ್‌ ಗೆಹ್ಲೋಟ್, ಸಚಿನ್‌ ಪೈಲಟ್‌, ಜಿಗ್ನೇಶ್‌ ಮೆವಾನಿ, ಕನ್ನಯ್ಯಾ ಕುಮಾರ್‌ ಸೇರಿದಂತೆ ಅನೇಕ ನಾಯಕರು ತಾರಾ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.

ಡಿ.1 ಮತ್ತು 5ರಂದು ಎರಡು ಹಂತದಲ್ಲಿ ಗುಜರಾತ್‌ ವಿಧಾನಸಭೆ ಚುನಾವಣೆ ನಡೆಯಲಿದೆ. ಡಿ.8ರಂದು ಮತ ಎಣಿಕೆ ನಡೆದು, ಫ‌ಲಿತಾಂಶ ಹೊರಬೀಳಲಿದೆ.

Advertisement

1995ರಿಂದ ಸತತವಾಗಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತಿದೆ. ಕೇಸರಿ ಪಕ್ಷದ ಓಟಕ್ಕೆ ಬ್ರೇಕ್‌ ಹಾಕಲು ಕಾಂಗ್ರೆಸ್‌ ಮತ್ತು ಆಪ್‌ ಮುಂದಾಗಿದೆ.

ಮುಂಬರುವ ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು ಈ ಹಿಂದಿನ ಎಲ್ಲಾ ದಾಖಲೆಗಳನ್ನು ಪುಡಿಗಟ್ಟಲಿದೆ. ಅತಿ ಹೆಚ್ಚಿನ ಸ್ಥಾನಗಳು ಮತ್ತು ಮತಗಳನ್ನು ಪಕ್ಷ ಪಡೆಯಲಿದೆ.
– ಅಮಿತ್‌ ಶಾ, ಕೇಂದ್ರ ಗೃಹ ಸಚಿವ

Advertisement

Udayavani is now on Telegram. Click here to join our channel and stay updated with the latest news.

Next