Advertisement

Rajasthan polls: ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ; ಕಲ್ಯಾಣ ಯೋಜನೆಗಳು, ಜಾತಿ ಗಣತಿ ಭರವಸೆ

04:35 PM Nov 21, 2023 | Team Udayavani |

ಜೈಪುರ: ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮಂಗಳವಾರ ಬಿಡುಗಡೆ ಮಾಡಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಸಮೀಕ್ಷೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.

Advertisement

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಪಂಚಾಯತ್ ಮಟ್ಟದಲ್ಲಿ ನೇಮಕಾತಿ ಮತ್ತು ಇತರ ಕಲ್ಯಾಣ ಯೋಜನೆಗಳಿಗೆ ಹೊಸ ಯೋಜನೆ ಭರವಸೆ ನೀಡಿದೆ.

ಜೈಪುರದ ರಾಜ್ಯ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ,ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್,ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಸೇರಿದಂತೆ ಪ್ರಮುಖರ ಉಪಸ್ಥಿತಿಯಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿದೆ.

ಕಾಂಗ್ರೆಸ್ ಪ್ರಣಾಳಿಕೆಯ ಪ್ರಮುಖ ಅಂಶಗಳು ಹೀಗಿವೆ: 

-ಪಂಚಾಯತ್ ಮಟ್ಟದಲ್ಲಿ ನೇಮಕಾತಿ, 4 ಲಕ್ಷ ಸರ್ಕಾರಿ ಉದ್ಯೋಗಗಳು , ಜಾತಿ ಗಣತಿ ಮತ್ತು ಇತರ ಕಲ್ಯಾಣ ಯೋಜನೆಗಳಿಗೆ ಹೊಸ ಯೋಜನೆ

Advertisement

-10,000 ರೂ.ಗೆ ಕುಟುಂಬದ ಮಹಿಳೆಗೆ ವಾರ್ಷಿಕ ಗೌರವಧನ

– 500 ರೂ.ಗೆ 1.04 ಕೋಟಿ ಕುಟುಂಬಗಳಿಗೆ ಎಲ್‌ಪಿಜಿ ಸಿಲಿಂಡರ್‌.

-ಜಾನುವಾರು ಸಾಕಣೆದಾರರಿಂದ ಪ್ರತಿ ಕೆ.ಜಿ.ಗೆ 2 ರೂ.ನಂತೆ ಸಗಣಿ ಖರೀದಿ


-ಚಿರಂಜೀವಿ ಆರೋಗ್ಯ ವಿಮಾ ಯೋಜನೆ 25 ಲಕ್ಷದಿಂದ 50 ಲಕ್ಷ ರೂ ಏರಿಕೆ.

-ಸರ್ಕಾರಿ ಉದ್ಯೋಗಿಗಳಿಗೆ ಹಳೆ ಪಿಂಚಣಿ ಪಡೆಯಲು ಹೊಸ ಕಾನೂನು

-ಸರ್ಕಾರಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ಅಥವಾ ಟ್ಯಾಬ್ಲೆಟ್.

-ಪ್ರಕೃತಿ ವಿಕೋಪದಿಂದಾಗುವ ನಷ್ಟವನ್ನು ಸರಿದೂಗಿಸಲು ಪ್ರತಿ ಕುಟುಂಬಕ್ಕೆ ರೂ 15 ಲಕ್ಷದವರೆಗೆ ವಿಮೆ.

-ಸಣ್ಣ ವ್ಯಾಪಾರಿಗಳು ಮತ್ತು ಅಂಗಡಿಕಾರರಿಗೆ 5 ಲಕ್ಷ ರೂ.ವರೆಗೆ ಬಡ್ಡಿ ರಹಿತ ಸಾಲ

-ರಾಜಸ್ಥಾನದ ಆರ್ಥಿಕತೆ ವರ್ಷಾಂತ್ಯಕ್ಕೆ 15 ಲಕ್ಷ ಕೋಟಿ ಆಗಲಿದೆ, 2030ರ ವೇಳೆಗೆ 30 ಲಕ್ಷ ಕೋಟಿಗೆ ಏರಿಸುವ ಗುರಿ

Advertisement

Udayavani is now on Telegram. Click here to join our channel and stay updated with the latest news.

Next