Advertisement

ಪಾಕಿಸ್ತಾನ ರಚನೆಯಾಗಲು ಕಾಂಗ್ರೆಸ್ ಕಾರಣ: ಪ್ರಧಾನಿ ಮೋದಿ

09:04 AM Apr 10, 2019 | Nagendra Trasi |

ಮಹಾರಾಷ್ಟ್ರ: ಪಾಕಿಸ್ತಾನ ರಚನೆಯಾಗಲು ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ವಾಗ್ದಾಳಿ ನಡೆಸಿದ್ದಾರೆ.

Advertisement

ಮಹಾರಾಷ್ಟ್ರದ ಲಾತೂರ್ ಜಿಲ್ಲೆಯಲ್ಲಿ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಯಾರು ಬಾಲಕೋಟ್ ಮೇಲೆ ವೈಮಾನಿಕ ದಾಳಿ ನಡೆಸಿದ್ದಾರೋ ಅವರಿಗೆ ನೀವು ನಿಮ್ಮ ಮೊದಲ ಮತವನ್ನು ಹಾಕಬೇಕು ಎಂದು ಈ ಬಾರಿಯ ಯುವ ಹಾಗೂ ಮೊದಲ ಮತದಾರರಲ್ಲಿ ವಿನಂತಿಸಿಕೊಂಡರು.

ಸ್ವಾತಂತ್ರ್ಯಕ್ಕೂ ಮುನ್ನ ಕಾಂಗ್ರೆಸ್ ಮುಖಂಡರು ಬುದ್ಧಿವಂತಿಕೆಯಿಂದ ವರ್ತಿಸಿದ್ದರೆ ಪಾಕಿಸ್ತಾನ ರಚನೆಯಾಗುತ್ತಿರಲೇ ಇಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

ಪಾಕಿಸ್ತಾನದ ಭಾಷೆಯಂತೆಯೇ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಆಶ್ವಾಸನೆ ಕೊಡಲಾಗಿದೆ. ಜಮ್ಮು-ಕಾಶ್ಮೀರದಲ್ಲಿ ಪ್ರತ್ಯೇಕ ಪ್ರಧಾನಮಂತ್ರಿ ಬೇಕು ಎನ್ನುವವರ ಬೆಂಬಲಕ್ಕೆ ಕಾಂಗ್ರೆಸ್ ಮತ್ತು ಎನ್ ಸಿಪಿ ನಿಂತಿದೆ ಎಂದು ದೂರಿದರು.

Advertisement

Udayavani is now on Telegram. Click here to join our channel and stay updated with the latest news.

Next