ಚಿತ್ರದುರ್ಗ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ನಾವು ವಿದ್ಯುತ್ ಬಿಲ್ ಪಾವತಿಸುವುದಿಲ್ಲ ಎಂದು ಗ್ರಾಮಸ್ಥರು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಚಿತ್ರದುರ್ಗ ತಾಲ್ಲೂಕಿನ ಜಾಲಿಕಟ್ಟೆ ಗ್ರಾಮಕ್ಕೆ ಸೋಮವಾರ ಎಪ್ರಿಲ್ ತಿಂಗಳ ವಿದ್ಯುತ್ ಬಿಲ್ ಪಾವತಿ ಸಂಗ್ರಹಕ್ಕೆ ಸಿದ್ದಾಪುರ ಗ್ರಾಮ ಪಂಚಾಯತಿಯ ಗ್ರಾಮ ವಿದ್ಯುತ್ ಪ್ರತಿನಿಧಿ ಗೋಪಿ ತೆರಳಿದ್ದಾರೆ. ಈ ವೇಳೆ ಗ್ರಾಮಸ್ಥರು ‘ವಿದ್ಯುತ್ ಉಚಿತ ಎಂದು ಘೋಷಿಸಿದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಆ ಕಾರಣಕ್ಕೆ ನಾವು ಹಣ ಪಾವತಿಸುವುದಿಲ್ಲ’ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಆರ್ ಎಸ್ಎಸ್ ಕಚೇರಿಗೆ ಭೇಟಿ ನೀಡಿದ ಹಂಗಾಮಿ ಸಿಎಂ ಬೊಮ್ಮಾಯಿ
ಆದೇಶ ಬರುವವರೆಗೂ ಹಣ ಪಾವತಿಸಬೇಕೆಂದು ಗ್ರಾಮ ವಿದ್ಯುತ್ ಪ್ರತಿನಿಧಿ ವಿವರಿಸಿದ್ದಾರೆ. ಮಾತಿಗೆ ಜಗ್ಗದ ಗ್ರಾಮಸ್ಥರು ‘ಆದೇಶದ ಬಗ್ಗೆ ಕಾಂಗ್ರೆಸ್ ನವರಿಗೆ ಕೇಳಿ. ಗ್ರಾಮದಲ್ಲಿ ಯಾರು ಈ ತಿಂಗಳಿನಿಂದ ಹಣ ಪಾವತಿಸುವುದಿಲ್ಲ’ ಎಂದು ಹೇಳಿ ಕಳುಹಿಸಿದ್ದಾರೆ.