Advertisement
ರಾಜ್ಯ ಕಾಂಗ್ರೆಸ್ ನಾಯಕರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಮೇಲಿಂದ ಮೇಲೆ ದಾಳಿ ಮಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಪಕ್ಷ ಕೇಂದ್ರ ಸರಕಾರ ಮತ್ತು ಆದಾಯ ತೆರಿಗೆ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. ಈ ಬಗ್ಗೆ ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಆದಾಯ ತೆರಿಗೆ ಇಲಾಖೆಯ ಕಚೇರಿಗಳ ಮುಂದೆ ಬೃಹತ್ ಪ್ರತಿಭಟನೆ ನಡೆಸುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಅವರ ಸೂಚನೆ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಮುಖಂಡರು ಪ್ರತಿಭಟನೆಯ ರೂಪುರೇಷೆಯನ್ನು ಸಿದ್ಧಪಡಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. Advertisement
ಐಟಿ ಟಾರ್ಗೆಟ್ : ಕಾಂಗ್ರೆಸ್‌ನಿಂದ ಪ್ರತಿಭಟನೆಗೆ ಸಿದ್ಧತೆ
09:45 AM Sep 06, 2017 | Karthik A |
Advertisement
Udayavani is now on Telegram. Click here to join our channel and stay updated with the latest news.