ಹೊಸದಿಲ್ಲಿ: ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮವನ್ನು ಮೇ 28 ರಂದು ನಿಗದಿಪಡಿಸಲಾಗಿದ್ದು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಇದರಿಂದ ಕೆರಳಿರುವ ಕಾಂಗ್ರೆಸ್ ಇದು ಮೋದಿಯವರ ವ್ಯಾನಿಟಿ ಯೋಜನೆ ಎಂದು ಟೀಕಿಸಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಬಗ್ಗೆ ಪ್ರತಿಕ್ರಿಯೆ ನೀಡಿ, ಸರಕಾರವು ಕೇವಲ ಚುನಾವಣ ಕಾರಣಗಳಿಗಾಗಿ ದಲಿತ ಮತ್ತು ಬುಡಕಟ್ಟು ಸಮುದಾಯಗಳಿಂದ ಭಾರತದ ರಾಷ್ಟ್ರಪತಿ ಆಯ್ಕೆಯನ್ನು ಖಚಿತಪಡಿಸಿದೆ. ಬಿಜೆಪಿ ಮತ್ತು ಆರ್ ಎಸ್ಎಸ್ ಅಡಿಯಲ್ಲಿ ರಾಷ್ಟ್ರಪತಿಗಳ ಕಚೇರಿಯನ್ನು ಟೋಕನಿಸಂಗೆ ಇಳಿಸಲಾಗಿದೆ ಎಂದು ಸರಣಿ ಟ್ವೀಟ್ ಮಾಡಿದ್ದಾರೆ.
ಹೊಸ ಸಂಸತ್ತಿನ ಶಂಕುಸ್ಥಾಪನಾ ಸಮಾರಂಭಕ್ಕೆ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ಆಹ್ವಾನಿಸಿರಲಿಲ್ಲ…ಹೊಸ ಸಂಸತ್ತಿನ ಕಟ್ಟಡದ ಉದ್ಘಾಟನೆಗೆ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಲಾಗುತ್ತಿಲ್ಲ ಎಂದು ಖರ್ಗೆ ಟ್ವೀಟ್ ಮಾಡಿದ್ದಾರೆ.
“ಭಾರತದ ಸಂಸತ್ತು ಭಾರತ ಗಣರಾಜ್ಯದ ಸರ್ವೋಚ್ಚ ಶಾಸಕಾಂಗ ಸಂಸ್ಥೆಯಾಗಿದೆ, ಮತ್ತು ಭಾರತದ ರಾಷ್ಟ್ರಪತಿಗಳು ಅದರ ಅತ್ಯುನ್ನತ ಸಾಂವಿಧಾನಿಕ ಅಧಿಕಾರ. ಅವರು ಮಾತ್ರ ಸರಕಾರ, ವಿರೋಧ ಪಕ್ಷ ಮತ್ತು ಪ್ರತಿಯೊಬ್ಬ ನಾಗರಿಕರನ್ನು ಸಮಾನವಾಗಿ ಪ್ರತಿನಿಧಿಸುತ್ತಾರೆ. ಅವರು ಭಾರತದ ಮೊದಲ ಪ್ರಜೆ.” ಎಂದು ಖರ್ಗೆ ಟ್ವೀಟ್ ಮಾಡಿದ್ದಾರೆ.
Related Articles
64,500 ಚದರ ಮೀಟರ್ ವಿಸ್ತೀರ್ಣದಲ್ಲಿ ನಿರ್ಮಿಸಲಾದ ತ್ರಿಕೋನ ಆಕಾರದ ನಾಲ್ಕು ಅಂತಸ್ತಿನ ಹೊಸ ಸಂಸತ್ ಕಟ್ಟಡ ಸಂಪೂರ್ಣವಾಗಿ ಸಿದ್ಧವಾಗಿದೆ.