Advertisement

Congress; ಲೋಕಸಭಾ ಟಿಕೆಟ್ ಆಫರ್ ತಿರಸ್ಕರಿಸಿದ ಶಿವರಾಜ್ ಕುಮಾರ್

08:21 AM Dec 11, 2023 | Team Udayavani |

ಬೆಂಗಳೂರು: “ಚುನಾವಣಾ ರಾಜಕೀಯಕ್ಕೆ ನಾನು ಬರಲ್ಲ’ ಎಂದು ನಟ ಶಿವರಾಜ್‌ ಕುಮಾರ್‌ ಬಹಿರಂಗವಾಗಿ ಸ್ಪಷ್ಟಪಡಿಸಿದ್ದಾರೆ.

Advertisement

ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಜಾಗೃತ ಸಮಾವೇಶದಲ್ಲಿ ಮಾತನಾಡುತ್ತ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಶಿವರಾಜ್‌ ಕುಮಾರ್‌ ಅವರಿಗೆ ಲೋಕಸಭೆ ಟಿಕೆಟ್‌ ಆಫ‌ರ್‌ ಕೊಟ್ಟರು. ಅದೇ ವೇದಿಕೆಯಲ್ಲಿ ಶಿವರಾಜ್‌ ಕುಮಾರ್‌ ಆ ಆಫ‌ರ್‌ಅನ್ನು ನಯವಾಗಿ ನಿರಾಕರಿಸಿದರು.

ಸಮಾವೇಶದಲ್ಲಿ ಮಾತನಾಡುತ್ತ ಡಿ.ಕೆ. ಶಿವಕುಮಾರ್‌, ನೀನು ರೆಡಿಯಾಗಪ್ಪ ಪಾರ್ಲಿಮೆಂಟ್‌ಗೆ ನಿಂತುಕೊಳ್ಳೋಕೆ. ನಿನಗೆ ಎಲ್ಲಿ ಬೇಕೋ ಅಲ್ಲಿ ಸೀಟು ಕೊಡುತ್ತೇನೆ ಎಂದು ಶಿವರಾಜ್‌ ಕುಮಾರ್‌ಗೆ ಹೇಳಿದ್ದೆ. ಇಲ್ಲ ಐದಾರು ಸಿನಿಮಾ ಒಪ್ಪಿಕೊಂಡು ಬಿಟ್ಟಿದ್ದೇನೆ ಎಂದು ಅವರು ಹೇಳಿದ್ದಾರೆ. ಸಿನಿಮಾ ಯಾವಾಗ ಬೇಕಾದರೂ ಮಾಡಬಹುದು, ಪಾರ್ಲಿಮೆಂಟ್‌ಗೆ ಹೋಗುವ ಯೋಗ ಸುಲಭವಾಗಿ ಬರುವುದಿಲ್ಲ. ಆ ಯೋಗ ಮನೆ ಬಾಗಿಲಿಗೆ ಬಂದಿದೆ. ಅವಕಾಶ ತಪ್ಪಿಸಿಕೊಳ್ಳಲು ಹೋಗ ಬೇಡಿ ಎಂದು ಡಿ.ಕೆ.ಶಿವಕುಮಾರ್‌ ಸಮಾವೇಶದಲ್ಲಿ ಬಹಿರಂಗವಾಗಿ ಶಿವರಾಜ್‌ ಕುಮಾರ್‌ಗೆ ಎಂಪಿ ಟಿಕೆಟ್‌ ಆಫ‌ರ್‌ ಕೊಟ್ಟರು.

ಇದಕ್ಕೆ ಪ್ರತಿಕ್ರಿಯಿಸಿದ ಶಿವರಾಜ್‌ ಕುಮಾರ್‌, ನಮ್ಮ ತಂದೆ ಕೊಟ್ಟಿರುವ ಬಳವಳಿ ಬಣ್ಣ ಹಚ್ಚೋದನ್ನು ಮುಂದುವರಿಸಿಕೊಂಡು ಹೋಗುತ್ತೇನೆ. ನಮ್ಮದೇನಿದ್ದರೂ ಮೇಕಪ್‌ ಹಾಕೋದು, ಸಿನಿಮಾ ಮಾಡೋದು. ರಾಜಕೀಯ ನಮಗೆ ಬೇಡ, ಅದನ್ನು ಮಾಡೋಕೆ ಬೇರೆಯವರು ಇದ್ದಾರೆ. ನನಗೆ ರಾಜಕೀಯ ಬೇಡ. ಆದರೆ, ನಾವು ಹೆಣ್ಣು ತೆಕ್ಕೊಂಡಿದ್ದು ಬಂಗಾರಪ್ಪ ಅವರ ಮಗಳನ್ನ. ಪತ್ನಿ ಗೀತಾ ಅವರಿಗೆ ಆಸಕ್ತಿಯಿದ್ದರೆ ರಾಜಕೀಯಕ್ಕೆ ಬರಲಿ. ಹೆಂಡ್ತಿ ಇಷ್ಟಪಡುತ್ತಿರುವುದನ್ನು ನೆರವೇರಿಸೋದು ಗಂಡನ ಕರ್ತವ್ಯ. ನಾನು ಅವರ ಬೆಂಬಲಕ್ಕೆ ಇರುತ್ತೇನೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next