Advertisement
ಹಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಸಿಎಂ, ಡಿಸಿಎಂ ಸೇರಿದಂತೆ ಕಾಂಗ್ರೆಸ್ ನವರು ರಾಜಭವನ ಚಲೋ ಏಕೆ ಮಾಡುತ್ತಾರೆ? ತಪ್ಪಿಗೆ ಕ್ಷಮೆ ಕೇಳಲು ಮುಡಾ ಚಲೋ ಮಾಡಲಿ ಎಂದು ಸಲಹೆ ನೀಡಿದರು.
Related Articles
Advertisement
ಮುಡಾ ಹಗರಣದಲ್ಲಿ ಖಾಸಗಿಯವರು ದೂರು ನೀಡಿದ್ದರಿಂದ ಈಗ ರಾಜ್ಯಪಾಲರು ತನಿಖೆಗೆ ಅನುಮತಿ ಕೊಟ್ಟಿದ್ದಾರೆ. ಬಿಎಸ್ ವೈ ಪ್ರಕರಣಕ್ಕೂ, ಸಿದ್ದರಾಮಯ್ಯ ಪ್ರಕರಣಕ್ಕೂ ವ್ಯತ್ಯಾಸವೇನಿಲ್ಲ. ಸಿಎಂ ಮೊದಲು ತನಿಖೆ ಎದುರುಸಲಿ ಎಂದು ಪ್ರಲ್ಹಾದ ಜೋಶಿ ಆಗ್ರಹಿಸಿದರು.
ರಾಜ್ಯಪಾಲರನ್ನು ಏಕೆ ಬೆದರಿಸುತ್ತೀರಿ:? ಮುಡಾ ಹಗರಣದಲ್ಲಿ ತನಿಖೆಗೆ ಅನುಮತಿ ನೀಡಿದ ಕಾರಣಕ್ಕೆ ರಾಜಭವನ ಚಲೋ ಮೂಲಕ ರಾಜ್ಯಪಾಲರನ್ನು ಬೆದರಿಸುವ, ಹೆದರಿಸುವ ತಂತ್ರ ಅನುಸರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಡೆಯನ್ನು ತೀವ್ರವಾಗಿ ಖಂಡಿಸಿದರು.
ಸಿಎಂ ಭ್ರಷ್ಟಾಚಾರದಲ್ಲಿ ತೊಡಗಿಲ್ಲ, ಮುಡಾ ಹಗರಣದಲ್ಲಿ ತಪ್ಪು ಮಾಡಿಲ್ಲ ಎಂದ ಮೇಲೆ ರಾಜ್ಯಪಾಲರನ್ನು ಬೆದರಿಸುವಂತಹ ರಾಜಭವನ ಚಲೋದಂತಹ ಡ್ರಾಮಾ ಏಕೆ? ಎಂದು ಸಚಿವ ಜೋಶಿ ಪ್ರಶ್ನಿಸಿದರು.
ಮುಡಾ ಭ್ರಷ್ಟಾಚಾರದಲ್ಲಿ ಸಹಾಯ ಮಾಡಿದ ಅಧಿಕಾರಿಗೆ ರಿಜಿಸ್ಟ್ರಾರ್ ಆಗಿ ಪ್ರಮೋಶನ್ ಮಾಡಿದ್ದೀರಿ. ಅದೇ ತಪ್ಪು ನಡೆದಿದೆ ಎಂದು ಪತ್ರ ಬರೆದ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಿದ್ದೀರಿ. ಈಗ ತನಿಖೆಗೆ ಅನುಮತಿ ನೀಡಿದರೆಂದು ರಾಜ್ಯಪಾಲರಿಗೆ ಬೆದರಿಕೆ ಹಾಕುತ್ತಿದ್ದೀರಿ ಎಂದು ಸಿಎಂ, ಡಿಸಿಎಂ ವಿರುದ್ಧ ಜೋಶಿ ಹರಿಹಾಯ್ದರು.
ರಾಜ್ಯಪಾಲರೂ ದಲಿತರೇ: ಸಿಎಂ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗದವನು ಎರಡು ಬಾರಿ ಸಿಎಂ ಅದ ಕಾರಣಕ್ಕೆ ಷಡ್ಯಂತ್ರ ಮಾಡುತ್ತಿದ್ದಾರೆ ಎಂದಿದ್ದಾರೆ. ಆದರೆ, ಘನ ರಾಜ್ಯಪಾಲರು ದಲಿತರೇ, ಅತ್ಯಂತ ಹಿಂದುಳಿದ ವರ್ಗದಿಂದ ಬಂದವರೇ ಆಗಿದ್ದಾರೆ. ಆಗ ಅವರನ್ನು ಹೊಗಳುತ್ತಿದ್ದ ಸಿಎಂ, ಈಗ ತಮ್ಮ ವಿರುದ್ಧ ತನಿಖೆಗೆ ಅನುಮತಿ ನೀಡಿದಾಕ್ಷಣ ರಾಜ್ಯಪಾಲರನ್ನು ಬೆದರಿಸುವುದೇಕೆ? ಎಂದು ಪ್ರಶ್ನಿಸಿದ ಜೋಶಿ, ಇಂಥದ್ದಕ್ಕೆಲ್ಲ ಯಾರೂ ಬಗ್ಗಲ್ಲ ಎಂದು ಖಡಕ್ ಆಗಿ ಹೇಳಿದರು.