Advertisement

ಕಾಂಗ್ರೆಸ್‌ ಬೇರೆ ಅರ್ಥ ಕಲ್ಪಿಸೋದು ಬೇಡ

01:09 PM Apr 21, 2021 | Team Udayavani |

ಬೆಂಗಳೂರು: ಕೊರೊನಾ ನಿಯಂತ್ರಣ ಕುರಿತು ರಾಜ್ಯಪಾಲರ ನೇತೃತ್ವದಲ್ಲಿ ಸಭೆ ನಡೆಸಿರುವುದಕ್ಕೆ ಕಾಂಗ್ರೆಸ್‌ನವರು ಬೇರೆ ಅರ್ಥಕಲ್ಪಿಸುವ ಅಗತ್ಯವಿಲ್ಲ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತ ನಾಡಿ, ದೇಶದ ಎಲ್ಲ ರಾಜ್ಯಗಳ ರಾಜ್ಯಪಾಲರಿಗೆ ಕೇಂದ್ರ ಸರ್ಕಾರಕೊರೊನಾ ನಿರ್ವ ಹಣೆಯಲ್ಲಿ ಭಾಗಿಯಾಗುವಂತೆ ಸೂಚಿಸಿದೆ.

Advertisement

ಆ ಹಿನ್ನೆಲೆಯಲ್ಲಿ ರಾಜ್ಯಪಾಲರು ಸಭೆ ನಡೆಸಿ ದ್ದಾರೆ. ಅದಕ್ಕೆ ಕಾಂಗ್ರೆಸ್‌ನವರು ಬೇರೆ ಅರ್ಥ ಕಲ್ಪಿಸುವುದು ಬೇಡ. ಎಲ್ಲರಾಜ್ಯಗಳ ರಾಜ್ಯಪಾಲರು ಸಭೆ ಮಾಡಿದ್ದಾರೆಂದು ಹೇಳಿದರು.

ಆಸ್ಪತ್ರೆಗಳಲ್ಲಿ ಆಮ್ಲಜನಕಕೊರತೆ ಇರುವ ಬಗ್ಗೆ ಬೆಂಗ ಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಕೇಂದ್ರ ಸಚಿವರ ಜತೆಮಾತನಾಡಿದ್ದಾರೆ. ಎಲ್ಲ ಆಸ್ಪತ್ರೆಗಳಲ್ಲಿ ಆಮ್ಲಜನಕ ದಾಸ್ತಾನಿಗೆ ಅವಕಾಶ ಕಲ್ಪಿಸಲಾಗುವುದು.ಸಿಲಿಂಡರ್‌ ಮೂಲಕವೇ ಆಮ್ಲಜನಕ ಸಾಗಾಟಕ್ಕೆ ವ್ಯವಸ್ಥೆ ಮಾಡಲಾಗುವುದು. ಆಸ್ಪತ್ರೆಗಳ ಸಾಮರ್ಥ್ಯ ಇದ್ದಷ್ಟುದಾಸ್ತಾನಿಗೆ ಅವಕಾಶ ಕಲ್ಪಿಸಲಾಗುವುದು. ಅದಕ್ಕೆ ಕೇಂದ್ರ ಸರ್ಕಾರವೂ ಅವಕಾಶ ಕಲ್ಪಿಸಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next