ಬೆಂಗಳೂರು: ರಾಜ್ಯ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಟ್ವೀಟ್ ವಾರ್ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಹೆಬ್ಬೆಟ್ಟು ಗಿರಾಕಿ ಮೋದಿಯಿಂದ ದೇಶ ನರಳುತ್ತಿದೆ ಎಂದು ಟೀಕಿಸಿದೆ.
ಕಾಂಗ್ರೆಸ್ ಶಾಲೆಗಳನ್ನು ಕಟ್ಟಿಸಿತ್ತು, ಆದರೂ ನರೇಂದ್ರ ಮೋದಿ ಓದಲಿಲ್ಲ, ವಯಸ್ಕರ ಶಿಕ್ಷಣ ಯೋಜನೆಯನ್ನೂ ಮಾಡಿತ್ತು ಆದರೂ ಓದಲಿಲ್ಲ. ಭಿಕ್ಷಾಟನೆ ನಿಷೇಧವಿದ್ದರೂ ಭಿಕ್ಷೆ ಬೇಡುವ ಸೋಂಬೇರಿ ಜೀವನದ ಗೀಳಿಗೆ ಬಿದ್ದವರು ಇಂದು ದೇಶವಾಸಿಗಳನ್ನು ಭಿಕ್ಷುಕರನ್ನಾಗಿಸಿದ್ದಾರೆ. ಹೆಬ್ಬೆಟ್ಟು ಗಿರಾಕಿ ಮೋದಿಯಿಂದ ದೇಶ ನರಳುತ್ತಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
ವಾಸ್ತವಗಳ ಬಗ್ಗೆ ಮಾತನಾಡದ ಪ್ರಧಾನಿ ತಮ್ಮ ಹೆಸರನ್ನು ‘ಮೌನೇಂದ್ರ ಮೋದಿ’ ಎಂದು ಬದಲಿಸಿಕೊಳ್ಳಲಿ. ಬೆಲೆ ಏರಿಕೆಯ ಬಗ್ಗೆ -ಮೌನ, ಕಾಶ್ಮೀರದ ದಳ್ಳುರಿಗೆ -ಮೌನ, ಚೀನಾ ಅತಿಕ್ರಮಣಕ್ಕೆ -ಮೌನ, ರೈತರ ಹತ್ಯೆಗೆ -ಮೌನ, ಅದಾನಿ ಡ್ರಗ್ಸ್ ದಂಧೆಯ ಬಗ್ಗೆ -ಮೌನ, ನಿರುದ್ಯೋಗದ ಬಗ್ಗೆ -ಮೌನ, ಪತ್ರಿಕಾಗೋಷ್ಠಿಗೆ -ಮೌನ ಎಂದು ಟೀಕೆ ಮಾಡಲಾಗಿದೆ.
ಇದನ್ನೂ ಓದಿ:ರೈತರಿಂದ ರೈಲು ತಡೆ, ಪ್ರತಿಭಟನೆ; ಉತ್ತರಪ್ರದೇಶದ ಹಲವೆಡೆ ರೈಲು ಸಂಚಾರ ವ್ಯತ್ಯಯ
ಇಂಧನ ತೈಲಗಳಲ್ಲಿ ಏರಿದ ಸರಕಾರದ ಆದಾಯ. 2014 = ರೂ. 75 ಸಾವಿರ ಕೋಟಿ 2021 = ರೂ. 3.25 ಲಕ್ಷ ಕೋಟಿ. ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಕುಸಿತ. 2014ರಲ್ಲಿ- 55 2021ರಲ್ಲಿ – 101. ಸರ್ಕಾರದ ಆದಾಯ ಹೆಚ್ಚಿದಂತೆ, ಭಾರತದಲ್ಲಿ ಬಡತನವೂ ಹೆಚ್ಚುತ್ತಿದೆ. ಹೆಬ್ಬೆಟ್ ಗಿರಾಕಿ ಮೋದಿ ಸರ್ಕಾರದ ಆದಾಯವನ್ನು ಯಾರ ಜೇಬಿಗೆ ತುಂಬುತ್ತಿದ್ದಾರೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಕಾಂಗ್ರೆಸ್ ಟ್ವೀಟ್ ಗೆ ತಿರುಗೇಟು ನೀಡಿರುವ ಬಿಜೆಪಿ, ದೇಶದಲ್ಲಿ ಸಾಕಷ್ಟು ಶಾಲೆಗಳಿದ್ದವು, ಆದರೆ 50 ವರ್ಷ ಮೇಲ್ಪಟ್ಟ ಅತಿ ಹಿರಿಯ ಯುವನಾಯಕ ಭಾರತದಲ್ಲಿ ಓದಲೇ ಇಲ್ಲ. ವಯಸ್ಕರ ಶಿಕ್ಷಣ ಯೋಜನೆಯಿದ್ದರೂ ಪಪ್ಪುವಿನ ಬುದ್ಧಿ ಬೆಳೆಯಲೆ ಇಲ್ಲ. ತಾತ, ಮುತ್ತಾತ, ಅಪ್ಪ ಪ್ರಧಾನಿ ಆಗಿದ್ದಾರೆ ಎಂಬ ಒಂದೇ ಅರ್ಹತೆಯ ಆಧಾರದ ಮೇಲೆ ತಾನು ಪ್ರಧಾನಿಯಾಗುತ್ತೇನೆ ಎಂದು ಭಿಕ್ಷುಕನಂತೆ ಅಲೆಯುತ್ತಿದ್ದಾನೆ ಎಂದು ಟ್ವೀಟ್ ಮಾಡಿದೆ.