Advertisement

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

09:27 PM Dec 28, 2024 | Team Udayavani |

ಕೊಚ್ಚಿ: ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ನಿಧನದ ಹಿನ್ನೆಲೆಯಲ್ಲಿ ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿರುವ ಹೊರತಾಗಿಯೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಉದ್ಘಾಟನಾ ಸಮಾರಂಭವೊಂದರಲ್ಲಿ ಭಾಗಿಯಾಗಿರುವುದು ವಿವಾದಕ್ಕೆ ಕಾರಣವಾಗಿದೆ.

Advertisement

ಪಿಣರಾಯಿ ಕ್ರಮಕ್ಕೆ ಕೇರಳ ಕಾಂಗ್ರೆಸ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ರಾಜ್ಯ ವಿಧಾನಸಭೆ ಪ್ರತಿಪಕ್ಷ ನಾಯಕ ವಿ.ಡಿ.ಸತೀಶನ್‌ ಮಾತನಾಡಿ, “ಒಬ್ಬ ಮುಖ್ಯಮಂತ್ರಿಗಳ ಈ ನಡೆ ಅನುಚಿತ ಹಾಗೂ ಅಗೌರವಯುತವಾದದ್ದು. ಡಾ. ಸಿಂಗ್‌ ನಿಧನದ ಶೋಕಾಚರಣೆ ವೇಳೆ ಕೊಚ್ಚಿಯ ವಿಮಾನ ನಿಲ್ದಾಣದ ಕಾರ್ಯಕ್ರಮವೊಂದರಲ್ಲಿ ಅವರು ಭಾಗಿಯಾಗಿದ್ದಾರೆ. ಅವರು ಕಾರ್ಯಕ್ರಮಕ್ಕೆ ಹೋಗಬಾರದಿತ್ತು. ಅಲ್ಲದೆ, ವಿಮಾನ ನಿಲ್ದಾಣ ಆಡಳಿತದವರಿಗೆ ಕಾರ್ಯಕ್ರಮ ಮುಂದೂಡುವಂತೆ ಹೇಳಬೇಕಿತ್ತು’ ಎಂದಿದ್ದಾರೆ.

ಇದನ್ನೂ ಓದಿ: Manmohan Singh ವಿಚಾರದಲ್ಲಿ ಕಾಂಗ್ರೆಸ್ ಅಗ್ಗದ ರಾಜಕಾರಣ ಮಾಡುತ್ತಿದೆ: ಬಿಜೆಪಿ

Advertisement

Udayavani is now on Telegram. Click here to join our channel and stay updated with the latest news.

Next