Advertisement
ರೋಡ್ ಶೋ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವರಾದ ಆರ್.ಅಶೋಕ್, ಮುನಿರತ್ನ, ಕೆ.ಗೋಪಾಲಯ್ಯ ಸೇರಿ ಹಲವು ಬಿಜೆಪಿ ನಾಯಕರು ಬ್ಯಾರಿಕೇಡ್ ಹೊರಗಡೆ ನಿಂತು ಪ್ರಧಾನಿ ಮೋದಿ ಅವರಿಗೆ ಕೈ ಬೀಸಿದರು. ಇದಕ್ಕೆ ವ್ಯಂಗ್ಯವಾಡಿರುವ ರಾಜ್ಯ ಕಾಂಗ್ರೆಸ್, ‘ರಾಜ್ಯ ಬಿಜೆಪಿ ನಾಯಕರನ್ನು ಮೋದಿ ಬೀದಿ ಪಾಲು ಮಾಡಿದ್ದಾರೆ’ ಎಂದು ಸಾಮಾಜಿಕ ಜಾಲತಾನ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.
Related Articles
Advertisement
ರಾಜ್ಯದ ಬಿಜೆಪಿ ನಾಯಕರಿಗೆ ಹೈಕಮಾಂಡ್ ನಾಯಕರು ಕನಿಷ್ಠ ಪ್ರಾಮುಖ್ಯತೆಯನ್ನೂ ಕೊಡುತ್ತಿಲ್ಲ. ಮೋದಿಯ ಕೋಪ ತಣ್ಣಗಾಗುವವರೆಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಆಗುವುದಿಲ್ಲ, ಮೋದಿ ಕೋಪ ತಣ್ಣಗಾಗುವುದೂ ಇಲ್ಲ! ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷ ನೇಮಕ ಆಗುವುದೂ ಅನುಮಾನ, ಹಾಲಿ ಅಧ್ಯಕ್ಷ ಬೀದಿ ಪಾಲಾಗಿದ್ದಾರೆ! ರಾಜ್ಯ ಬಿಜೆಪಿ ಅಬ್ಬೇಪಾರಿಯಾಗಿದೆ ಎಂದಿದೆ.
ಬಿಜೆಪಿಯ ರಾಜ್ಯಾಧ್ಯಕ್ಷ, ಮಾಜಿ ಸಚಿವರುಗಳು, ಹಾಲಿ ಶಾಸಕರುಗಳು, ಹೀಗೆ ಬೀದಿಪಾಲಾಗಿದ್ದಾರೆ ಎಂದರೆ “ಸರ್ವಾಧಿಕಾರಿ”ಯ ಮೊದಲ ಬಲಿಪಶುಗಳು ಬಿಜೆಪಿಗರಿಗೇ ಅಲ್ಲವೇ? ಆತ್ಮ ಗೌರವ, ಸ್ವಾಭಿಮಾನವಿಲ್ಲದೆ ಕೈಬೀಸುತ್ತಿದ್ದಾರೆ ಎಂದರೆ ಗುಲಾಮಗಿರಿಯ ಪರಮಾವಧಿಗೆ ತಲುಪಿದ್ದಾರೆ ಎಂದರ್ಥವಲ್ಲವೇ ಎಂದು ಕಾಂಗ್ರೆಸ್ ಕುಟುಕಿದೆ.