Advertisement

ಕೈ ಐಟಿ ಸೆಲ್‌ ಸದಸ್ಯ ಸೆರೆ

10:41 AM Aug 01, 2018 | Harsha Rao |

ಹೊಸದಿಲ್ಲಿ: ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕಾಂಗ್ರೆಸ್‌ ಐಟಿ ಘಟಕದ ಸದಸ್ಯರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಐಟಿ ಸೆಲ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆಗೆ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಚಿರಾಗ್‌ ಪಾಟ್ನಾಯಕ್‌ರನ್ನು ಸೋಮವಾರ ರಾತ್ರಿ ಬಂಧಿಸಲಾಗಿದೆ ಎಂದು ದಿಲ್ಲಿ ಪೊಲೀಸರು ಮಾಹಿತಿ ನೀಡಿದ್ದಾರೆ. ಜು.3ರಂದೇ ಚಿರಾಗ್‌ ವಿರುದ್ಧ ಎಫ್ಐಆರ್‌ ದಾಖಲಾಗಿತ್ತು. ಇತ್ತೀಚೆಗೆ ಪ್ರಕರಣ ಸಂಬಂಧ ಪ್ರಕಟಣೆ ಹೊರಡಿಸಿದ್ದ ಕಾಂಗ್ರೆಸ್‌ ಸಾಮಾಜಿಕ ಮಾಧ್ಯಮ ಮುಖ್ಯಸ್ಥೆ ದಿವ್ಯಸ್ಪಂದನ, “ಚಿರಾಗ್‌ ಪರ ತಂಡದ ಸದಸ್ಯರು ಸಹಿ ಮಾಡಿದ್ದ ಪತ್ರವನ್ನು ತೋರಿಸಿದ್ದರಲ್ಲದೆ, ದೂರದಾರಳು ತಮ್ಮ ವೈಯಕ್ತಿಕ ಹಾಗೂ ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಐಟಿ ಘಟಕಕ್ಕೆ ರಾಜೀನಾಮೆ ನೀಡಿದ್ದಾರೆ’ ಎಂದು ಹೇಳಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next