Advertisement
ಅರಮನೆ ಮೈದಾನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸೇರಿದಂತೆ ಎಲ್ಲ ನಾಯಕರೂ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಗುರಿ ನಮ್ಮ ಮುಂದಿದೆ ಎಂದು ಹೇಳಿದರು.
Related Articles
Advertisement
ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ 40 ಸಾವಿರ ಕೋಟಿ ರೂ.ನುಂಗಿ ಹಾಕಿದ್ದಾರೆ. ರಕ್ಷಣಾ ಇಲಾಖೆಯ ಇತಿಹಾಸದಲ್ಲಿಯೇ ಇಷ್ಟು ದೊಡ್ಡ ಹಗರಣ ಆಗಿರಲಿಲ್ಲ. ಬಿಜೆಪಿಯವರ ನಿಜವಾದ ಬಣ್ಣವನ್ನು ಬಯಲು ಮಾಡುವ ಕೆಲಸ ಮಾಡಬೇಕು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಾಯಿ ಬಿಡದ ಬಿಜೆಪಿಯವರು, ಈಗ ದೇಶಭಕ್ತಿಯ ಬಗ್ಗೆ ಮಾತನಾಡುತ್ತಾರೆ. ಮೇಲ್ವರ್ಗದ ಬಡವರಿಗೆ ಮೀಸಲಾತಿ ನೀಡುತ್ತೇವೆ ಎನ್ನುವುದು ಕೂಡ ಮೂಗಿಗೆ ತುಪ್ಪ ಸವರುವ ಕೆಲಸ ಎಂದು ಹೇಳಿದರು.
ರಾಜ್ಯದ ಜನರು ಹಿಂದಿನ ಕಾಂಗ್ರೆಸ್ ಸರ್ಕಾರದ ಕೆಲಸಗಳನ್ನು ಈಗ ನೆನಪು ಮಾಡಿಕೊಳ್ಳುತ್ತಿದ್ದಾ ರೆ. ಜನರಿಗೆ ಸುಳ್ಳು ಹೇಳಿ ದಾರಿ ತಪ್ಪಿಸುವ ಡೋಂಗಿಗಳನ್ನು ಅಧಿಕಾರದಿಂದ ಕಿತ್ತೂಗೆಯಲು ಜನರಿಗೆ ಕಾಂಗ್ರೆಸ್ ಸಾಧನೆಗಳ ಸತ್ಯ ಹೇಳಬೇಕು ಎಂದು ಹೇಳಿದರು.
ಆಪರೇಷನ್ ಹುಟ್ಟು ಹಾಕಿದ್ದೇ ಯಡಿಯೂರಪ್ಪ’ರಾಜ್ಯದಲ್ಲಿ ಆಪರೇಷನ್ ಕಮಲವನ್ನು ಹುಟ್ಟು ಹಾಕಿದ್ದೇ ಯಡಿಯೂರಪ್ಪ. 2008ರಲ್ಲಿ ಅಧಿಕಾರಕ್ಕೆ ಬಂದು ಆಪರೇಷನ್ ಕಮಲದಂತ ಕೆಟ್ಟ ವ್ಯವಸ್ಥೆಯನ್ನು ಜಾರಿಗೆ ತಂದರು. ಈಗ ಮತ್ತೆ ಸಮ್ಮಿಶ್ರ ಸರ್ಕಾರವನ್ನು ಉರುಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ನಿಮಗೆ ವಯಸ್ಸಾಗಿದೆ. ಈಗ ಅದನ್ನೆಲ್ಲ ಮಾಡಬೇಡಿ ಅಂತ ಹೇಳಿದರೂ ಅವರು ಕೇಳುವುದಿಲ್ಲ. ಆದರೆ, ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಬೀಳುವುದಿಲ್ಲ. ಕಾಂಗ್ರೆಸ್ ಶಾಸಕರು ನಮ್ಮ ಪಕ್ಷದ ಚಿಹ್ನೆಯಿಂದ ಗೆದ್ದು ಹಣ, ಅಧಿಕಾರದ ಆಸೆಗಾಗಿ ಆಪರೇಷನ್ ಕಮಲಕ್ಕೆ ಒಳಗಾಗಬಾರದು ಎಂದು ಸಿದ್ದರಾಮಯ್ಯ ಮನವಿ ಮಾಡಿದರು.