Advertisement

ಗೋವಾ: ಕಾಂಗ್ರೆಸ್‌ ಹಕ್ಕು ಮಂಡನೆ

12:30 AM Mar 17, 2019 | |

ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ ಪರ್ರಿಕರ್‌ ನೇತೃತ್ವದ ಬಿಜೆಪಿ ಸರ್ಕಾರ ಬಹುಮತ ಕಳೆದುಕೊಂಡಿದೆ. ಹೀಗಾಗಿ ಹೊಸ ಸರ್ಕಾರ ರಚನೆಗೆ ಅನುವು ಮಾಡಿಕೊಡಬೇಕೆಂದು ರಾಜ್ಯಪಾಲೆ ಮೃದುಲಾ ಸಿನ್ಹಾಗೆ ಕಾಂಗ್ರೆಸ್‌ ಪತ್ರ ಬರೆದಿದೆ. ಇಬ್ಬರು ಶಾಸಕರ ರಾಜೀನಾಮೆ ಮತ್ತು ಶಾಸಕ ಫ್ರಾನ್ಸಿಸ್‌ ಡಿ’ ಸೋಜಾ ನಿಧನದಿಂದ ಸರ್ಕಾರದ ಸಂಖ್ಯಾ ಬಲ 37ಕ್ಕೆ ಕುಸಿದಿದೆ ಎಂದು ಪ್ರತಿಪಕ್ಷ ನಾಯಕ ಚಂದ್ರಕಾಂತ ಕವೆಕರ್‌ ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ. 

Advertisement

ಹಾಲಿ ಸದನದಲ್ಲಿ ಕಾಂಗ್ರೆಸ್‌ಗೆ 14 ಶಾಸಕರ ಬಲವಿದೆ. ಚುನಾವಣೆ ನಡೆದ ಸಂದರ್ಭದಲ್ಲಿ 16 ಶಾಸಕರನ್ನು ಹೊಂದಿತ್ತು. ನಂತರದ ದಿನಗಳಲ್ಲಿ ಇಬ್ಬರು ಶಾಸಕರು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಈ ಅಂಶಗಳನ್ನು ಪ್ರಸ್ತಾಪಿಸಿರುವ ಕವೆÉàಕರ್‌, ಬಿಜೆಪಿ ಸರ್ಕಾರ ಬಹುಮತ ಕಳೆದುಕೊಂಡಿರುವುದರಿಂದ ಕಾಂಗ್ರೆಸ್‌ ನೇತೃತ್ವದ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ. ಸಂವಿಧಾನ ಉಲ್ಲಂ ಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸುವ ಪ್ರಯತ್ನ ನಡೆಸಿದರೆ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುತ್ತದೆ ಎಂದೂ ಎಚ್ಚರಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next