Advertisement

ಕೈ ಸ್ಟಾರ್‌ ಪ್ರಚಾರಕರಿವರು

01:18 AM Mar 31, 2019 | Team Udayavani |

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್‌ ಪರ ಪ್ರಚಾರ ನಡೆಸಲಿರುವ “ಸ್ಟಾರ್‌ ಪ್ರಚಾರಕರ’ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ, ನಟಿ ಖುಷ್ಬೂ ಸುಂದರ್‌ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

Advertisement

ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ, ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕಿ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌, ರಾಜ್ಯ ಚುನಾವಣಾ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌, ಗುಲಾಮ್‌ ನಬಿ ಆಜಾದ್‌, ಪೃಥ್ವಿರಾಜ್‌ ಚೌಹಾಣ್‌ , ಸಚಿನ್‌ ಪೈಲಟ್‌, ಸಲೀಂ ಅಹಮದ್‌ ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿದ್ದಾರೆ. ಪ್ರಿಯಾಂಕಾ ವಾದ್ರಾ ಅವರು ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿರುವುದು ಎರಡೂ ಪಕ್ಷಗಳ ಕಾರ್ಯಕರ್ತರಲ್ಲಿ ಹುಮ್ಮಸ್ಸು ತುಂಬಲಿದೆ ಎಂದು ಹೇಳಲಾಗುತ್ತಿದೆ.

ರಾಜ್ಯ ನಾಯಕರ ಪೈಕಿ, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌,
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಲೋಕಸಭೆಯ ಕಾಂಗ್ರೆಸ್‌ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ಮುಖಂಡರಾದ ಡಿ.ಕೆ. ಶಿವಕುಮಾರ್‌, ಎಚ್‌.ಕೆ.ಪಾಟೀಲ್‌, ರಾಮಲಿಂಗಾರೆಡ್ಡಿ, ಸಿ.ಎಂ.ಇಬ್ರಾಹಿಂ, ಆರ್‌.ವಿ.ದೇಶಪಾಂಡೆ, ಎಂ.ಬಿ.ಪಾಟೀಲ್‌, ಕೆ.ಜೆ. ಜಾರ್ಜ್‌, ಸತೀಶ್‌ ಜಾರಕಿಹೋಳಿ, ಕೃಷ್ಣ ಬೈರೇಗೌಡ, ಜಮೀರ್‌ ಅಹ್ಮದ್‌, ಡಾ.ಜಯಮಾಲ, ಕೆ.ಎಚ್‌.ಮುನಿಯಪ್ಪ, ಉಮಾಶ್ರೀ, ಮೋಟಮ್ಮ, ಐವನ್‌ ಡಿಸೋಜಾ ಸ್ಟಾರ್‌ ಪ್ರಚಾರಕರಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next