ಬೆಂಗಳೂರು : ಮೇಕೆದಾಟು ಪಾದಯಾತ್ರೆ ಪಾದಯಾತ್ರೆ ಸಂದರ್ಭದಲ್ಲಿ ಸಂರಕ್ಷಿತಾರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಪರಿಸರ ಮಾಲಿನ್ಯ ನಡೆದಿದೆ ಎಂದು ಆರೋಪ ವ್ಯಕ್ತವಾದ ಹಿನ್ನೆಲೆಯಲ್ಲಿ ಸಂಕ್ರಾತಿ ದಿನ ಕಾಂಗ್ರೆಸ್ ಕಾರ್ಯಕರ್ತರು ಸ್ವಚ್ಚತಾ ಕಾರ್ಯ ನಢಸಿದರು.
ಡಿ.ಕೆ. ಶಿವಕುಮಾರ್, ಸುರೇಶ್ ಸೂಚನೆ ಮೇರೆಗೆ ಸಂಗಮದಿಂದ ಪಾದಯಾತ್ರೆ ಮಾರ್ಗದುದ್ದಕ್ಕೂ ಸ್ವಚ್ಛತೆ ಕಾರ್ಯ ನಡೆಸಲಾಗಿದೆ.ಮೇಕೆದಾಟು ಪಾದಯಾತ್ರೆ ಆರಂಭಗೊಂಡ ಸಂಗಮದಿಂದ ಹಿಡಿದು ಪಾದಯಾತ್ರೆ ನಡೆದ ದಾರಿಯುದ್ದಕ್ಕೂ ಸ್ವಚ್ಛತೆ ಕಾರ್ಯ ಭರದಿಂದ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು, ಸ್ವಯಂಸೇವಕರು ಈ ಸ್ಚಚ್ಚತಾ ಕಾರ್ಯ ನಡೆಸುತ್ತಿದ್ದಾರೆ.
ಪ್ಲಾಸ್ಟಿಕ್ ಕಾಲಿ ಬಾಟಲಿಗಳು, ಪ್ಲಾಸ್ಟಿಕ್ ಕವರ್ ಗಳು, ಪ್ಲೇಟ್ ಗಳು, ಕಾಗದಗಳು, ಬಳಸಿ ಬಿಸಾಡಿದ ಮಾಸ್ಕ್, ಕೈಗವಸು ಮತ್ತಿತರ ತ್ಯಾಜ್ಯಗಳನ್ನು ತೆರವು ಹಾಗೂ ವಿಲೇವಾರಿ ಮಾಡಲಾಗುತ್ತಿದೆ.
ಪಾದಯಾತ್ರೆ ನಡೆದ ಮಾರ್ಗದುದ್ದಕ್ಕೂ ಪ್ರತ್ಯೇಕ ತಂಡಗಳಲ್ಲಿ ಈ ಸ್ವಚ್ಛತೆ ಕಾರ್ಯ ನಡೆದಿದೆ. ಪಾದಯಾತ್ರೆ ಸಂದರ್ಭದಲ್ಲಿ ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ ಮಾಲಿನ್ಯ ನಡೆದಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಪರಿಸರ ತಜ್ಞರಿಂದಲೂ ಟೀಕೆ ವ್ಯಕ್ತವಾಗಿತ್ತು.