Advertisement

February; ಮಂಗಳೂರಿನಲ್ಲಿ ಕಾಂಗ್ರೆಸ್‌ ರಾಜ್ಯ ಸಮಾವೇಶ‌: ಡಿಕೆಶಿ

12:38 AM Jan 25, 2024 | Team Udayavani |

ಮಂಗಳೂರು: ಕಾಂಗ್ರೆಸ್‌ ಪಕ್ಷವನ್ನು ರಾಜ್ಯದಲ್ಲಿ ಮತ್ತಷ್ಟು ಬಲಿಷ್ಠ ಗೊಳಿಸುವ ನಿಟ್ಟಿನಲ್ಲಿ ರಾಜ್ಯ ಮಟ್ಟದ ಬೃಹತ್‌ ಕಾಂಗ್ರೆಸ್‌ ಸಮಾವೇಶವನ್ನು ಫೆಬ್ರವರಿ ಮೊದಲವಾರದಲ್ಲಿ ಮಂಗಳೂರಿನಲ್ಲಿ ಆಯೋಜಿಸಲಾಗಿದ್ದು ಕಾಂಗ್ರೆಸ್‌ ನ ಬೂತ್‌ ಮಟ್ಟದ ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸುವಂತೆ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

Advertisement

ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಬುಧವಾರ ರಾತ್ರಿ ಕಾಂಗ್ರೆಸ್‌ ಕಾರ್ಯಕರ್ತರ ಜತೆ ಸಭೆ ನಡೆಸಿ ಅವರು ಮಾತನಾಡಿದರು. ಲೋಕಸಭೆಗೆ ಅಭ್ಯರ್ಥಿ ಮುಖ್ಯವಲ್ಲ. ಕಾಂಗ್ರೆಸ್‌ ಪಕ್ಷ ಮುಖ್ಯ. ಎರಡೂ ಜಿಲ್ಲೆಯ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ವಿಶೇಷವಾಗಿ ಶ್ರಮಿಸಿದರೆ ಎರಡೂ ಕ್ಷೇತ್ರಗಳು ಮತ್ತೆ ಕಾಂಗ್ರೆಸ್‌ ಪಾಲಾಗುವುದರಲ್ಲಿ ಅನುಮಾನವಿಲ್ಲ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next