Advertisement
ಬಳ್ಳಾರಿಯಲ್ಲಿ ಮಾತ್ರ ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿ ಸ್ಪರ್ಧೆ ಮಾಡಿದ್ದು, ಮಂಡ್ಯ ಹಾಗೂ ಶಿವಮೊಗ್ಗದಲ್ಲಿ ಮೈತ್ರಿ ಪಕ್ಷ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದಾರೆ. ಆದರೂ, ಮೈತ್ರಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿಯನ್ನು ಹಿರಿಯ ಸಚಿವರಿಗೆ ವಹಿಸಲಾಗಿದೆ. ಮಂಡ್ಯ ಹಾಗೂ ರಾಮನಗರದಲ್ಲಿ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸದಿರುವುದರಿಂದ ಸ್ಥಳೀಯವಾಗಿ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಸಾಕಷ್ಟು ಆಕ್ರೋಶ ವ್ಯಕ್ತಪಡಿಸಿದ್ದು, ಚುನಾವಣೆಯಲ್ಲಿ ಜೆಡಿಎಸ್ ವಿರುದಟಛಿ ಕೆಲಸ ಮಾಡುವ ಸಾಧ್ಯತೆ ಇದೆ. ಪಕ್ಷದಲ್ಲಿನ ಸ್ಥಳೀಯ ಮಟ್ಟದ ಆಂತರಿಕ ಬಂಡಾಯವನ್ನು ಶಮನ ಮಾಡಿ, ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರಲು ಉಸ್ತುವಾರಿಗಳಿಗೆ ಸೂಚನೆ ನೀಡಲಾಗಿದೆ.
ಲೋಕಸಭಾ ಕ್ಷೇತ್ರಗಳಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಗಳಿಗೂ ಸಚಿವರನ್ನು ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ. ಅವರೊಂದಿಗೆ ಸಂಸದರು, ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರನ್ನು ಜಾತಿ ಮತ್ತು ಪ್ರಾದೇಶಿಕತೆಯ ಲೆಕ್ಕಾಚಾರದಲ್ಲಿ ನಿಯೋಜಿಸಲಾಗಿದ್ದು, ಎಲ್ಲರೂ ಚುನಾವಣೆ ಮುಗಿಯುವವರೆಗೂ ತಮಗೆ ಜವಾಬ್ದಾರಿ ವಹಿಸಿರುವ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುವಂತೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.