Advertisement
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮ ಆಧಾರಿತ ಮೀಸಲಾತಿಗೆ ಅವಕಾಶ ಇಲ್ಲ ಅಂತಾ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಆಕ್ಷೇಪದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮುಸ್ಲೀಮರಲ್ಲೂ ಚಪ್ಪರಬಂದ್, ನದಾಫ್, ಪಿಂಜಾರ್ ಸೇರಿದಂತೆ 24 ಜಾತಿಯವರು ಬಹಳ ಹಿಂದುಳಿದವರಿದ್ದಾರೆ. ಅವುಗಳಿಗೆ ಈಗಾಗಲೇ 2ಎ ಯಲ್ಲಿ ಮೀಸಲಾತಿ ಇದೆ. ಅವರಿಗೆ ಹೆಚ್ಚುವರಿಯಾಗಿ ಶೇ 4 ಪರ್ಸೆಂಟ್ ಮೀಸಲಾತಿ ಕೊಟ್ಟಿದ್ದರು. ಅದನ್ನೇ ಹಿಂದುಳಿದ ವರ್ಗಗಳ ಆಯೋಗ ಆಕ್ಷೇಪ ಮಾಡಿದೆ. ಈಗ ಆ ಕೇಸ್ ಸುಪ್ರೀಂ ಕೋರ್ಟಿನಲ್ಲಿದೆ ನೋಡೋಣ ಎಂದರು.
ಹುಬ್ಬಳ್ಳಿ ಕಾಲೇಜ್ ಯುವತಿ ನೇಹಾ ಹತ್ಯೆ ಪ್ರಕರಣ ಸಾಮಾನ್ಯ ಎಂದಿದ್ದ ಸಚಿವ ಶಿವಾನಂದ ಪಾಟೀಲ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಆಕ್ರೋಶ ವ್ಯಕ್ತಪಡಿಸಿದ ಬಸವರಾಜ ಬೊಮ್ಮಾಯಿ, ಸಚಿವ ಶಿವಾನಂದ ಪಾಟೀಲ ಹೇಳಿಕೆ ಕಾಂಗ್ರೆಸ್ ನ ಮನಸ್ಥಿತಿಯನ್ನು ತೋರಿಸುತ್ತದೆ. ಕೊಲೆ ಮಾಡಿದವ ಅಲ್ಪ ಸಂಖ್ಯಾತನಿದ್ದಾನೆ. ತುಷ್ಟೀಕರಣ ರಾಜಕಾರಣದ ಚಶ್ಮಾ ಹಾಕಿಕೊಂಡು ಪ್ರಕರಣವನ್ನ ಕಾಂಗ್ರೆಸ್ ನೋಡುತ್ತಿದೆ. ಈ ಪ್ರಕರಣವನ್ನು ಗೌಣ ಮಾಡುವುದಕ್ಕಾಗಿ ಈ ಥರದ ಹೇಳಿಕೆಯನ್ನು ನೀಡುತ್ತಿದ್ದಾರೆ. ಇದು ಸಮಾಜಕ್ಕೆ ಬಹಳ ನೋವುಂಟು ಮಾಡುವ ಕೆಲಸ. ಇಂಥ ಹೇಳಿಕೆ ನೇಹಾ ಕಳೆದುಕೊಂಡು ನೋವಿನಲ್ಲಿರುವ ಕುಟುಂಬಕ್ಕೂ ನೋವು ತರುತ್ತದೆ. ಶಿವಾನಂದ ಪಾಟೀಲ್ ಅವರು ಯಾವಾಗಲೂ ಹೀಗೆ ಮಾತನಾಡುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಇಂಥವರೇ ಬೇಕಾಗಿದ್ದಾರೆ ಎಂದು ಹೇಳಿದರು.
Related Articles
Advertisement