Advertisement
ಕರಾವಳಿಯಲ್ಲಿ ಬಿಜೆಪಿ ಬೆಂಬಲಿತ ಮೀನುಗಾರರ ಸಂಖ್ಯೆ ಹೆಚ್ಚಾಗಿರುವುದನ್ನು ಅರಿತ ಕಾಂಗ್ರೆಸ್, ಮೀನುಗಾರರ ನಡುವೆ ಪಕ್ಷ ಸಂಘಟನೆ ಮಾಡಿ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕರಾವಳಿಯಲ್ಲಿ ಹೆಚ್ಚು ಸೀಟು ಗೆಲ್ಲಲು ಬೇಕಾದ ಸಿದ್ಧತೆ ಮಾಡಿಕೊಳ್ಳುತ್ತಿದೆ.
Related Articles
Advertisement
ಅಖೀಲ ಭಾರತ ಕಾಂಗ್ರೆಸ್‌ನಲ್ಲಿ ಮೀನುಗಾರರ ಘಟಕ ಅಸ್ಥಿತ್ವಕ್ಕೆ ಬಂದಿದೆ. ಹೀಗಾಗಿ ಕೆಪಿಸಿಸಿಯಲ್ಲೂ ಅದರ ಘಟಕ ಆರಂಭಿಸಿದ್ದು, ಮಾಜಿ ಶಾಸಕರಾದ ಯು.ಆರ್.ಸಭಾಪತಿಯವರು ಅದರ ನೇತೃತ್ವ ವಹಿಸಿದ್ದಾರೆ. ಅದರ ಮೊದಲ ಕಾರ್ಯಕಾರಣಿ ನಡೆದಿದೆ. ಮೀನುಗಾರರ ಸಮಸ್ಯೆ, ಸಂಘಟನೆ ಸೇರಿದಂತೆ ಹಲವು ವಿಷಯದ ಚರ್ಚೆ ನಡೆದಿದ್ದು, ಘಟಕದ ಸಭೆ ನಡೆಸಿ ಮೀನುಗಾರರ ಸಮಾವೇಶ ಮಾಡುವ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದರು.
ಚುನಾವಣೆಗೆ ಸಜ್ಜು: ಮುಂಬರುವ ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿದ್ದೇವೆ. ಆದ್ದರಿಂದಲೇ ಚುನಾವಣಾ ಪ್ರಣಾಳಿಕೆಯ ಸಮಿತಿಯನ್ನು ಹೊಸದಾಗಿ ರಚಿಸಲಾಗಿದೆ. ಜಿಲ್ಲಾ ಘಟಕದಲ್ಲೂ ಸಮಿತಿ ಬದಲಾವಣೆಗೆ ಒತ್ತಡವಿದೆ. ಹೀಗಾಗಿ ಕೆಲವು ಜಿಲ್ಲೆಯಲ್ಲಿ ಬದಲಾವಣೆ ಮಾಡಿದ್ದೇವೆ. ಚುನಾವಣೆಗೆ ಸಂಭವನೀಯ ಅಭ್ಯರ್ಥಿಗಳನ್ನು ಗುರುತಿಸುವ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ. ಅವರಿಗೆ ತಮ್ಮ ಕ್ಷೇತ್ರಗಳಲ್ಲಿ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ಹೇಳಿದರು.
ಸಿ.ಪಿ.ಯೋಗೀಶ್ವರ್ ಸೇರಿದಂತೆ ಕೆಲವರು ಪಕ್ಷ ಬಿಡುವ ಸೂಚನೆ ಇರಲಿಲ್ಲ. ಪಕ್ಷ ಬಿಟ್ಟವರ ಬಗ್ಗೆ ಚಿಂತೆಯೂ ಇಲ್ಲ. ಬಿಜೆಪಿಯಿಂದ ಕಾಂಗ್ರೆಸ್‌ಗೆ ಬರಲಿರುವ ಶಾಸಕರ ದೊಡ್ಡ ಪಟ್ಟಿಯೇ ಇದೆ. ಮೊದಲ ಹಂತದಲ್ಲಿ ಬಿಜೆಪಿಯಿಂದ 20 ಶಾಸಕರು ಕಾಂಗ್ರೆಸ್‌ಗೆ ಸೇರಲು ಸಜ್ಜಾಗಿದ್ದಾರೆ ಎಂದು “ಬಾಂಬ್’ಸಿಡಿಸಿದರು.