Advertisement

ಚಾಮರಾಜನಗರ ದುರಂತ: ಸರ್ಕಾರದ ಮುಖ್ಯಕಾರ್ಯದರ್ಶಿಯನ್ನು ಭೇಟಿಯಾಗಲಿದೆ ಕಾಂಗ್ರೆಸ್ ನಿಯೋಗ

02:51 PM May 03, 2021 | Team Udayavani |

ಬೆಂಗಳೂರು: ಚಾಮರಾಜನಗರದ ಕೋವಿಡ್ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗವು ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಿದೆ.

Advertisement

ಚಾಮರಾಜನಗರ ಆಕ್ಸಿಜನ್ ದುರಂತ ಸೇರಿದಂತೆ ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ದುಸ್ಥಿತಿ ಹಿನ್ನೆಲೆಯಲ್ಲಿ ಬೆಂಗಳೂರು ಶಾಸಕರು, ಸಂಸದರು ಮತ್ತಿತರ ಮುಖಂಡರನ್ನು ಒಳಗೊಂಡ ಕಾಂಗ್ರೆಸ್ ನಿಯೋಗವು ಕರ್ನಾಟಕ ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರನ್ನು ವಿಧಾನಸೌಧದ ಅವರ ಕಚೇರಿಯಲ್ಲಿ ಇಂದು ಸಂಜೆ 5.30 ಕ್ಕೆ ಭೇಟಿ ಮಾಡಿ, ಮನವಿ ಸಲ್ಲಿಸಲಿದೆ.

ಇದನ್ನೂ ಓದಿ:ಚಾಮರಾಜನಗರ ಪ್ರಕರಣ : ಸಮಸ್ಯೆ ಗೊತ್ತಿದ್ದರೂ ಸುಮ್ಮನಿದ್ದಿದ್ದು ಅಪರಾಧ : ಧ್ರುವನಾರಾಯಣ್ ಕಿಡಿ

ಚಾಮರಾಜನಗರದ ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಅಭಾವ ಉಂಟಾಗಿ 24 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದು ಸಾವೋ ಅಥವಾ ಕೊಲೆಯೋ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next