Advertisement

ಪ್ರಚಂಡ ಬಹುಮತಕ್ಕೆ ಧನ್ಯವಾದ ಸಮರ್ಪಿಸಿದ ಕಾಂಗ್ರೆಸ್‌

11:07 PM May 14, 2023 | Team Udayavani |

ಬೆಂಗಳೂರು: ರಾಜ್ಯದ ಜನರಿಗೆ ಜವಾಬ್ದಾರಿಯುತ, ಪಾರದರ್ಶಕ ಹಾಗೂ ದಕ್ಷ ಆಡಳಿತ ನೀಡಲು ಪರಿಶ್ರಮ ಹಾಗೂ ಒಗ್ಗಟ್ಟಿನ ಮೂಲಕ ಕೆಲಸ ಮಾಡಲು ಕಾಂಗ್ರೆಸ್‌ ಶಾಸಕಾಂಗ ಪಕ್ಷ ನಿರ್ಣಯ ಕೈಗೊಂಡಿದೆ.

Advertisement

ಎಐಸಿಸಿ ವೀಕ್ಷಕ ಸುಶೀಲ್‌ ಕುಮಾರ್‌ ಶಿಂಧೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್‌ ಸಹಿತ ಪಕ್ಷದ ಪ್ರಮುಖ ನಾಯಕರ ಉಪಸ್ಥಿತಿಯಲ್ಲಿ ರವಿವಾರ ರಾತ್ರಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೆಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ರಾಜ್ಯದ 6.5 ಕೋಟಿ ಕನ್ನಡಿಗರ ಹಿತ ರಕ್ಷಣೆ ಹಾಗೂ ಸೇವೆ ನಮ್ಮ ಆದ್ಯ ಕರ್ತವ್ಯವಾಗಿದ್ದು, ಸಾಮಾಜಿಕ ನ್ಯಾಯ ಮತ್ತು ಆರ್ಥಿಕ ಸಮಾನತೆ ಸರಕಾರದ ನೀತಿಗಳ ಮೂಲ ಉದ್ದೇಶವಾಗಿರಲಿದೆ. ಜನರ ಕಲ್ಯಾಣಕ್ಕಾಗಿ ಸರಕಾರವು ಮುಂದಿನ ದಿನಗಳಲ್ಲಿ ರೂಪಿಸುವ ಪ್ರತಿಯೊಂದು ನೀತಿಗಳು ರಾಜ್ಯದ ಪ್ರತಿಯೊಬ್ಬ ವ್ಯಕ್ತಿಯ ಹಾಗೂ ಕುಟುಂಬದ ಜೀವನವನ್ನು ಸುಧಾರಿಸುವ ನಿಟ್ಟಿನಲ್ಲಿ ಕೈಗೊಳ್ಳಲು ನಿರ್ಣಯಿಸಲಾಗಿದೆ.

ಕಾಂಗ್ರೆಸ್‌ ಜನರಿಗೆ ನೀಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಿದೆ. ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ಮರು ಸ್ಥಾಪಿಸಲು ಹಾಗೂ ಭಾರತದಲ್ಲಿ ಕರ್ನಾಟಕ ರಾಜ್ಯ ಶಾಂತಿ, ಪ್ರಗತಿ ಹಾಗೂ ಸೌಹಾರ್ದ ವಿಚಾರಗಳಲ್ಲಿ ಅಗ್ರ ರಾಜ್ಯವನ್ನಾಗಿ ಮಾಡುವುದು ನಮ್ಮ ಗುರಿಯಾಗಿದೆ ಎಂದು ಕಾಂಗ್ರೆಸ್‌ ಹೇಳಿದೆ.

ಸೋನಿಯಾ ಗಾಂಧಿಗೆ ಧನ್ಯವಾದ
ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ರಾಜ್ಯ ಚುನಾವಣೆಯಲ್ಲಿ ಅವಿರತವಾಗಿ ಪ್ರಚಾರ ನಡೆಸಿ, ಸೂಕ್ತ ತಂತ್ರಗಾರಿಕೆ ಹಾಗೂ
ಮಾರ್ಗದರ್ಶನ ನೀಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಐದು ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ತಲುಪಿಸಿ ಚುನಾವ
ಣೆಯ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಹುಲ್‌ ಗಾಂಧಿಯವರಿಗೂ ಧನ್ಯವಾದ ಹೇಳಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next