Advertisement

ಕಾಂಗ್ರೆಸ್‌ ಬೆದರಿಕೆ: ಬಿಜೆಪಿ

09:15 AM Dec 10, 2018 | Team Udayavani |

ಹೊಸದಿಲ್ಲಿ: ಸೋನಿಯಾ ಗಾಂಧಿ ಅಳಿಯ ರಾಬರ್ಟ್‌ ವಾದ್ರಾ ಸಂಸ್ಥೆಗಳ ಮೇಲೆ ದಾಳಿ ನಡೆಸಲಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ಸಂಸ್ಥೆಗಳಿಗೆ ಕಾಂಗ್ರೆಸ್‌ ಬೆದರಿಕೆ ಹಾಕುತ್ತಿದೆ ಎಂದು ಬಿಜೆಪಿ ವಕ್ತಾರ ಶಹನವಾಜ್‌ ಹುಸೇನ್‌ ಆರೋಪಿಸಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುವ ಬಗ್ಗೆ ಪ್ರಧಾನಿ ಮೋದಿ ವಾಗ್ಧಾನ ಮಾಡಿದಂತೆ ನಡೆದುಕೊಳ್ಳುತ್ತಿದ್ದಾರೆ. ಕಾಂಗ್ರೆಸ್‌ ನಾಯಕರು ಮಾಡಿರುವ ಆರೋಪಗಳೆಲ್ಲವೂ ಸುಳ್ಳು. ಅಕ್ರಮ ಕಂಡು ಬಂದ ಹಿನ್ನೆಲೆಯಲ್ಲಿ ತನಿಖಾ ಸಂಸ್ಥೆಗಳು ಕಾನೂನಿನ ಅನ್ವಯ ಕ್ರಮ ಕೈಗೊಂಡಿವೆ. ಅದು ಅವರಿಗೆ ಭೀತಿ ಮೂಡಿಸಿದೆ ಎಂದು ಹುಸೇನ್‌ ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next