Advertisement
ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯ ಪುಣ್ಯತಿಥಿ ಅಂಗವಾಗಿ ವಿಧಾನಸೌಧ ಆವರಣದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಶಾಸಕರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಡಿಸೆಂಬರ್ 8 ರಂದು ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಆ ಸಭೆಗೆ ನನಗೂ ಆಹ್ವಾನ ನೀಡಲಾಗಿದೆ. ನಾನು ಪಾಲ್ಗೊಳ್ಳಲಿದ್ದೇನೆ ಎಂದು ತಿಳಿಸಿದರು.ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್-ಜೆಡಿಎಸ್ ಶಾಸಕರಿಬ್ಬರೂ ಸಮಾನ. ಜತೆಗೆ ರಾಜ್ಯದ ಎಲ್ಲ ಕ್ಷೇತ್ರಗಳಿಗೂ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ತಾರತಮ್ಯ ಮಾಡುವುದಿಲ್ಲ ಎಂದು ಹೇಳಿದರು.