ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆ ಮಾಡಿದ ಆರು ಆರೋಪಿಗಳನ್ನು ಬಿಡುಗಡೆ ಮಾಡಿರುವ ಸುಪ್ರೀಂಕೋರ್ಟ್ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲು ಕಾಂಗ್ರೆಸ್ ತೀರ್ಮಾನಿಸಿದೆ. ಈ ವಾರದಲ್ಲಿಯೇ ಕಾನೂನು ಪ್ರಕ್ರಿಯೆ ಮುಕ್ತಾಯಗೊಳಿಸಲಾಗುತ್ತದೆ ಎಂದು ಹೆಸರು ಬಹಿರಂಗಪಡಿಸಲಿಚ್ಛಿಸದ ಮುಖಂಡರೊಬ್ಬರು ತಿಳಿಸಿದ್ದಾರೆ.
Advertisement
ಸೆ.11ರಂದು ಸುಪ್ರೀಂಕೋರ್ಟ್ ನಳಿನಿ ಶ್ರೀಹರನ್, ಆರ್.ಪಿ.ರವಿಚಂದ್ರನ್ ಸೇರಿದಂತೆ ಆರು ಮಂದಿಯನ್ನು ಬಿಡುಗಡೆಗೊಳಿಸುವ ಬಗ್ಗೆ ಆದೇಶ ನೀಡಿತ್ತು. ಕಾಂಗ್ರೆಸ್‌ನ ಕಟು ಟೀಕೆಯ ಬಳಿಕ ಕೇಂದ್ರ ಸರ್ಕಾರ ನ್ಯಾಯಾಲಯದ ತೀರ್ಮಾನ ಪ್ರಶ್ನೆ ಮಾಡಿ ಮೇಲ್ಮನವಿ ಸಲ್ಲಿಸಿತ್ತು.