Advertisement
ಕೊರೊನಾ ಮಾರ್ಗಸೂಚಿ ಮುಂದಿಟ್ಟು ಪಾದಯಾತ್ರೆಗೆ ಅವಕಾಶ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ನಾವು ಪಾದಯಾತ್ರೆ ಮಾಡಿಯೇ ಸಿದ್ಧ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.ಶನಿವಾರ ಬೆಳಗ್ಗೆ ಕಾಂಗ್ರೆಸ್‌ನ ಹಿರಿಯ ನಾಯಕರ ಸಭೆ ಕರೆದಿದ್ದು, ಸರಕಾರ ಪಾದಯಾತ್ರೆ ತಡೆದರೆ ಯಾವ ರೀತಿಯ ಕಾರ್ಯತಂತ್ರ ಅನುಸರಿಸಬೇಕು ಎಂಬ ಬಗ್ಗೆ ಚರ್ಚಿಸಿ ಮೂರ್‍ನಾಲ್ಕು ಪರ್ಯಾಯ ಮಾರ್ಗಗಳ ಬಗ್ಗೆಯೂ ಚಿಂತಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕನಕಪುರದ ಸಂಗಮ ಸಮೀಪದ ತೋಟವೊಂದರಲ್ಲಿ ಶನಿವಾರ ಕಾಂಗ್ರೆಸ್ ನಾಯಕರು ವಾಸ್ತವ್ಯ ಇರಲಿದ್ದು, ರವಿವಾರ ಬೆಳಗ್ಗೆ ಪಾದಯಾತ್ರೆ ಆರಂಭಿಸಲು ನಿರ್ಧರಿಸಲಾಗಿದೆ. ಪ್ರತಿ ದಿನ ಒಂದೊಂದು ಜಿಲ್ಲೆಯಿಂದ ಪಾದಯಾತ್ರೆಗೆ ಕಾರ್ಯಕರ್ತರು ಬರಲಿದ್ದು, 5 ಸಾವಿರಕ್ಕೂ ಹೆಚ್ಚು ಮಂದಿ ನೋಂದಣಿ ಮಾಡಿಕೊಂಡಿದ್ದಾರೆ.
ಮೇಲ್ನೋಟಕ್ಕೆ ಪಾದಯಾತ್ರೆ ವೇಳೆ ಜನಜಂಗುಳಿ ಅಥವಾ ದಟ್ಟಣೆ ಉಂಟಾಗುವ ಲಕ್ಷಣಗಳು ಕಂಡುಬರು ತ್ತಿದೆ. ಆದರೆ, ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು, ಕೊರೊನಾ ನಿಯಮ ಪಾಲಿಸಿ ನೀರಿಗಾಗಿ ನಡಿಗೆ ಮಾಡುತ್ತೇವೆ ಎಂದೂ ಹೇಳಿದ್ದಾರೆ. ಅದು ಹೇಗೆ ಸಾಧ್ಯ ಎಂಬುದನ್ನು ಕಾದು ನೋಡಬೇಕಾಗಿದೆ. ಇದನ್ನೂ ಓದಿ:ಪಾಕ್ ಸುಪ್ರೀಂಕೋರ್ಟ್‌ಗೆ ಮೊದಲ ಮಹಿಳಾ ಜಡ್ಜ್
Related Articles
-ರಾಮಲಿಂಗಾ ರೆಡ್ಡಿ, ಕೆಪಿಸಿಸಿ ಕಾರ್ಯಾಧ್ಯಕ್ಷ
Advertisement
ಪಾದಯಾತ್ರೆಗೆ ನಾವು ವಿರೋಧ ಮಾಡುತ್ತಿಲ್ಲ. ಆದರೆ ಹಿಂದೆ ಆಡಳಿತ ನಡೆಸಿದವರು, ಮುಖ್ಯಮಂತ್ರಿಯಾಗಿದ್ದವರು ಹಾಗೂ ಅಪಾರ ಅನುಭವ ಇರುವವರು ಈ ಬಗ್ಗೆ ಆಲೋ ಚಿಸಲಿ. ಪ್ರತಿಭಟನೆಗಳು ಪ್ರಜಾಪ್ರಭುತ್ವದ ಭಾಗವಾಗಿದೆ. ಪಾದಯಾತ್ರೆಯನ್ನು ಸ್ವಲ್ಪ ದಿನ ಮುಂದೂಡಲಿ.-ಡಾ| ಕೆ.ಸುಧಾಕರ್, ಆರೋಗ್ಯ ಸಚಿವ ಒಪ್ಪಿಗೆ ಸಿಗುವುದಾದರೆ ನಾನೂ ಪಾಲ್ಗೊಳ್ಳುತ್ತೇನೆ
ಬೆಂಗಳೂರು: ಮೇಕುದಾಟು ಪಾದಯಾತ್ರೆ ಮೂಲಕ ಆ ಯೋಜನೆಗೆ ಕೇಂದ್ರ ಸರಕಾರದ ಒಪ್ಪಿಗೆ ಸಿಗುತ್ತದೆ ಎಂದು ಕಾಂಗ್ರೆಸ್ ಖಚಿತಪಡಿಸಿದರೆ ನಾನು ಎಲ್ಲರಿಗಿಂತ ಮೊದಲೇ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಪಕ್ಷದ ಕಚೇರಿ ಜೆ.ಪಿ. ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನದ್ದು ಪಾದಯಾತ್ರೆ ಅಲ್ಲ, ಅದು ಮತಯಾತ್ರೆ ಆಗಿದೆ. ಕೇವಲ ಮುಂದಿನ ಚುನಾವಣೆ ದೃಷ್ಟಿಯಲ್ಲಿರಿಸಿಕೊಂಡು ಪಾದಯಾತ್ರೆ ಹೆಸರಲ್ಲಿ ಜನರಿಗೆ ಮಂಕುಬೂದಿ ಎರಚಲಾಗುತ್ತಿದೆ ಎಂದರು.