Advertisement

ಪೆಗಾಸಸ್ : 22 ರಂದು ದೇಶಾದ್ಯಂತ ರಾಜ್ ಭವನಕ್ಕೆ ಕಾಂಗ್ರೆಸ್ ಮೆರವಣಿಗೆ   

11:27 AM Jul 20, 2021 | Team Udayavani |

ನವ ದೆಹಲಿ : ಸಂಸತ್ ಮುಂಗಾರು ಅಧಿವೇಶನ ಆರಂಭವಾಗುವುದರೊಂದಿಗೆ ರಾಷ್ಟ್ರ ರಾಜಕಾರಣದಲ್ಲಿ ‘ಪೆಗಾಸಸ್’ ಕೂಡ ದೊಡ್ಡ ಚರ್ಚೆಗೆ ಕಾರಣವಾಗಿದೆ.  ಜಗತ್ತಿನ ಪ್ರಮುಖ ಪತ್ರ ಕರ್ತರು, ರಾಜಕೀಯ ಕ್ಷೇತ್ರದ ವ್ಯಕ್ತಿಗಳು, ಮಾನವ ಹಕ್ಕುಗಳ ಕಾರ್ಯಕರ್ತರು, ರಾಯಭಾರ ಕಚೇರಿಗಳಲ್ಲಿ ಕೆಲಸ ಮಾಡುವ ಪ್ರಮುಖರ ದೂರವಾಣಿ ಕದ್ದಾಲಿಸುವ ಪ್ರಯತ್ನ ಮತ್ತು ನಿಗಾ ಇರಿಸುವ ಪ್ರಯತ್ನ ನಡೆಸಲಾಗಿದೆ ಎಂಬ ವರದಿ ಹೊರ ಬೀಳುತ್ತಿದ್ದಂತೆ ರಾಷ್ಟ್ರೀಯ ಕಾಂಗ್ರೆಸ್ ಬಿಜೆಪಿ ವಿರುದ್ಧ ನಿಂತಿದೆ.

Advertisement

ನಾಳೆ(ಬುಧವಾರ, ಜುಲೈ 21) ದೇಶದ ಎಲ್ಲಾ ರಾಜ್ಯಗಲ್ಲಿ ಪೆಗಾಸಸ್ ಕುರಿತಾಗಿ ಕಾಂಗ್ರೆಸ್ ಪತ್ರಿಕಾ ಗೋಷ್ಟಿ ಕರೆದಿದೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆ ಎಎನ್ ಐ ವರದಿ ಮಾಡಿದೆ.

ಇದನ್ನೂ ಓದಿ : ರಾಜ್ಯ ಕಾಂಗ್ರೆಸ್ ನಲ್ಲಿ ಯಾವುದೇ ಬಿರುಕು- ಭಿನ್ನಾಭಿಪ್ರಾಯವಿಲ್ಲ: ಸಿದ್ದರಾಮಯ್ಯ

‘ಪೆಗಾಸಸ್ ಪ್ರಾಜೆಕ್ಟ್’ ಮಾಧ್ಯಮ ವರದಿಯ ಬಗ್ಗೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆ ನಡೆಸಿದ ನ್ಯಾಯಾಂಗ ವಿಚಾರಣೆಗೆ ಒತ್ತಾಯಿಸಿ ಪಕ್ಷದ ರಾಜ್ಯ ಘಟಕಗಳು ಜುಲೈ 22 ರಂದು ದೇಶಾದ್ಯಂತ ರಾಜ್ ಭವನಕ್ಕೆ ಪ್ರತಿಭಟನಾ ಮೆರವಣಿಗೆ ನಡೆಸಲಿವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನು, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಅವರ ಕಚೇರಿ ಸಿಬ್ಬಂದಿಗಳ ದೂರವಾಣಿಗಳನ್ನು ಸಹ ಹ್ಯಾಕ್ ಮಾಡಲಾಗಿದೆ ಎಂದು  ವರದಿಗಳು ತಿಳಿಸಿವೆ.

Advertisement

2019 ರ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಸೆಲ್ ಫೋನ್ ಗಳನ್ನು ಹ್ಯಾಕ್ ಮಾಡಲು ಸ್ಪೈವೇರ್ ‘ಪೆಗಾಸಸ್’ ನನ್ನು ಸಹ ಬಳಸಲಾಗುತ್ತಿದೆ ಎಂದು ವರದಿಯಾಗಿದೆ.

“ಪೆಗಾಸಸ್” ಸ್ಪೈವೇರ್ ಮತ್ತು ಎಲ್ಲಾ ಎನ್ ಎಸ್ ಒ ಉತ್ಪನ್ನಗಳನ್ನು ಸರ್ಕಾರಕ್ಕೆ ಮಾತ್ರ ಮಾರಾಟ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ಪ್ರಕಟಣೆಯಲ್ಲಿ ಆರೋಪಿಸಿದೆ.

ಇನ್ನು,  ಭಾರತ ಸರ್ಕಾರ ಮತ್ತು ಅದರ ಏಜೆನ್ಸಿಗಳು ವಿರೋಧ ಪಕ್ಷದ ನಾಯಕರು, ಪತ್ರಕರ್ತರು, ವಕೀಲರು ಮತ್ತು ಕಾರ್ಯಕರ್ತರ ಫೋನ್ ಗಳನ್ನು ಹ್ಯಾಕ್ ಮಾಡಲು ಸ್ಪೈವೇರ್ ನನ್ನು ಖರೀದಿಸಿವೆ ಎಂಬುದು ಸ್ಪಷ್ಟವಾಗಿದೆ. ಈ ನಿಟ್ಟಿನಲ್ಲಿ, ಸ್ಪೈವೇರ್ ಪೆಗಾಸಸ್ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆ ನಡೆಸಿದ ನ್ಯಾಯಾಂಗ ವಿಚಾರಣೆ ಮತ್ತು ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ಒತ್ತಾಯಿಸಿ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲು ಪಕ್ಷ ನಿರ್ಧರಿಸಿದೆ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ :  ಇಳಿಕೆ ಕಾಣುತ್ತಿದೆ ಸೋಂಕು ಪ್ರಕರಣಗಳು: ದೇಶದಲ್ಲಿ 30,093 ಹೊಸ ಕೋವಿಡ್ ಪ್ರಕರಣಗಳು ಪತ್ತೆ

Advertisement

Udayavani is now on Telegram. Click here to join our channel and stay updated with the latest news.

Next