Advertisement

Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್‌ ಪ್ರಧಾನ ಕಚೇರಿ ಸ್ಥಳಾಂತರ

09:09 PM Jan 08, 2025 | Team Udayavani |

ನವದೆಹಲಿ: ಇಲ್ಲಿನ ಕೋಟ್ಲಾ ರಸ್ತೆಯಲ್ಲಿ ನಿರ್ಮಿಸಿರುವ ಎಐಸಿಸಿಯ ನೂತನ ಕೇಂದ್ರ ಕಚೇರಿ “ಇಂದಿರಾ ಭವನ’ವನ್ನು ಜ.15ರಂದು ಉದ್ಘಾಟಿಸಲಾಗುತ್ತದೆ.

Advertisement

ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅದನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ, ಕಾಂಗ್ರೆಸ್‌ ಆಡಳಿತ ಇರುವ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ 400 ಮಂದಿ ಗಣ್ಯರು ಭಾಗವಹಿಸಲಿದ್ದಾರೆ.

ಸದ್ಯ ದಿಲ್ಲಿಯ ಅಕºರ್‌ ರಸ್ತೆಯ ಕಟ್ಟಡದಲ್ಲಿ 1978ರಿಂದ ಎಐಸಿಸಿ ಪ್ರಧಾನ ಕಚೇರಿ ಕಾರ್ಯ ನಿರ್ವಹಿಸುತ್ತಿದೆ. ಹೊಸ ಕಚೇರಿ ನಿರ್ಮಾಣಕ್ಕೆ ಹೊಸ 2009ರಲ್ಲಿ ಅಂದಿನ ಪ್ರಧಾನಿ ಡಾ. ಮಹನೋಹನ್‌ ಸಿಂಗ್‌ ಶಂಕುಸ್ಥಾಪನೆ ನೆರವೇರಿಸಿದ್ದರು. ಹಲವಾರು ಕಾರಣಗಳಿಂದ ಕಾಮಗಾರಿ ಪೂರ್ಣವಾಗಲು 15 ವರ್ಷ ಬೇಕಾಯಿತು.

ಇದನ್ನೂ ಓದಿ: Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!

Advertisement

Udayavani is now on Telegram. Click here to join our channel and stay updated with the latest news.

Next