Advertisement

ಬೆಂಗಳೂರು ನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲ್ಲಲಿದೆ: ಡಿಕೆಶಿ

08:39 PM Nov 23, 2021 | Team Udayavani |

ಬೆಂಗಳೂರು:ವಿಧಾನಪರಿಷತ್‌ ಚುನಾವಣೆಯಲ್ಲಿ ಬೆಂಗಳೂರು ನಗರ ಕ್ಷೇತ್ರವನ್ನು ಕಾಂಗ್ರೆಸ್‌ ಮೊದಲಿನಿಂದಲೂ ಗೆದ್ದುಕೊಂಡು ಬರುತ್ತಿದೆ. ಈ ಬಾರಿಯೂ ಗೆಲ್ಲಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

Advertisement

ಬೆಂಗಳೂರು ನಗರ ಕ್ಷೇತ್ರದ ಅಭ್ಯರ್ಥಿ ಯೂಸುಫ್ ಷರೀಫ್ ಅವರ ನಾಮಪತ್ರ ಸಲ್ಲಿಕೆ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಚುನಾವಣೆಯಲ್ಲಿ ಕಾರ್ಯಕರ್ತರು ಉತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ. ಪಕ್ಷ ಇಲ್ಲಿ ಜಯಗಳಿಸಲಿದೆ ಎಂದು ತಿಳಿಸಿದರು.

ಚುನಾವಣೆ ಸ್ಪರ್ಧೆ ವಿಚಾರದಲ್ಲಿ ಕೆಲವು ಕಾರ್ಯಕರ್ತರು ಕೂಡ ನಾಮಪತ್ರ ಸಲ್ಲಿಸಿದ್ದಾರೆ. ಕಾನೂನು ಸಲಹೆ ಪಡೆದು ಅವರನ್ನು ವಾಪಸ್ಸು ತೆಗೆಸುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಪರಿಷತ್‌ ಚುನಾವಣೆಗೆ ಕೆಲವರಿಗೆ ಟಿಕೆಟ್‌ ನೀಡಿಲ್ಲ. ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ರೀತಿಯ ಕ್ರಮ ಕೈಗೊಂಡಿದ್ದು, ಅವರನ್ನು ಬಳಸಿಕೊಳ್ಳುತ್ತೇವೆ. ವಿಧಾನಸಭೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವುದು ನಮ್ಮ ಗುರಿ ಎಂದು ತಿಳಿಸಿದರು.

ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನಲ್ಲಿ ಕುಟುಂಬದವರಿಗೆ ಮಣೆ ಹಾಕಲಾಗಿದೆ ಎಂದು ಬಿಜೆಪಿಯವರು ಆರೋಪಿಸುತ್ತಾರೆ. ಪಾಪ, ಅವರ ಲಿಸ್ಟ್‌ ನೋಡಲಿ. ಧಾರವಾಡದಲ್ಲಿ ಜಗದೀಶ್‌ ಶೆಟ್ಟರ್‌ ಸಹೋದರ ಪ್ರದೀಪ್‌ ಶೆಟ್ಟರ್‌, ಶಿವಮೊಗ್ಗದಲ್ಲಿ ಡಿ.ಎಚ್‌.ಶಂಕರಮೂರ್ತಿ ಪುತ್ರ ಅರುಣ್‌ ಹೀಗೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ ಎಂದು ಹೇಳಿದರು.

Advertisement

ಇದನ್ನೂ ಓದಿ:ಕ್ಲಬ್ , ರೆಸಾರ್ಟ್‌ ಮೇಲೆ ಪೊಲೀಸರ ದಾಳಿ : 113 ಜನರ ಬಂಧನ, 5.83 ಲಕ್ಷ ರೂ ಜಪ್ತಿ

ಇದಕ್ಕೂ ಮುನ್ನ ಯೂಸುಫ್ ಷರೀಪ್‌ ಅವರು ಜಿಲ್ಲಾಧಿಕಾರಿ ಮಂಜುನಾಥ್‌ ಅವರಿಗೆ ನಾಮಪತ್ರ ಸಲ್ಲಿಕೆ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಪರಿಷತ್‌ ಸದಸ್ಯ ನಾರಾಯಣಸ್ವಾಮಿ, ಶಾಸಕ ಶಿವಣ್ಣ ಉಪಸ್ಥಿತರಿದ್ದರು.

ಮಳೆ ಅನಾಹುತ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡುತ್ತಿದ್ದಾರೆ. ರಾಜಕೀಯಕ್ಕಾಗಿ ಭೇಟಿ ಮಾಡುತ್ತಿದ್ದಾರೆ. ಇದರಿಂದ ಯಾವುದೇ ಪ್ರಯೋಜನವಾಗದು. ಇದೊಂದು ಕಣ್ಣೊರೆಸುವ ತಂತ್ರ. ಕಳೆದ ವರ್ಷ ಮಳೆಯಿಂದಾದ ಹಾನಿಗೆ ಸರ್ಕಾರ ಇದುವರೆಗೂ ಬೆಳೆ ಪರಿಹಾರ ನೀಡಿಲ್ಲ. ಕೊರೊನಾದಿಂದ ಮೃತಪಟ್ಟವರಿಗೂ ಸರ್ಕಾರ ಪರಿಹಾರ ಕೊಟ್ಟಿಲ್ಲ. ಎಷ್ಟು ಪರಿಹಾರ ಕೊಟ್ಟಿದೆ ಎಂದು ದಾಖಲಾತಿ ಬಿಡುಗಡೆ ಮಾಡಲಿ.
– ಡಿ.ಕೆ.ಶಿವಕುಮಾರ್‌

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next