Advertisement

ಹಿಮಾಚಲ ಪ್ರದೇಶದಲ್ಲಿ ಮೋದಿ ರೋಡ್‌ ಶೋ ಫ್ಲಾಪ್‌ ಯಾಕೆ?: ಕಾಂಗ್ರೆಸ್‌

08:58 PM Dec 08, 2022 | Team Udayavani |

ಬೆಂಗಳೂರು: ಚುನಾವಣಾ ದಿಕ್ಸೂಚಿಯನ್ನು ಗುಜರಾತಿನ ಫಲಿತಾಂಶದಿಂದಷ್ಟೇ ನೋಡುವ ಅಗತ್ಯವಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಮೆಗಾ ರೋಡ್‌ ಶೋ ಹಿಮಾಚಲ ಪ್ರದೇಶದಲ್ಲಿ ವಿಫಲವಾಗಿದ್ದೇಕೆ ಎಂದು ಕಾಂಗ್ರೆಸ್‌ ಟ್ವಿಟರ್‌ನಲ್ಲಿ ಬಿಜೆಪಿ ನಾಯಕರನ್ನು ಪ್ರಶ್ನಿಸಿದೆ.

Advertisement

ಸರಣಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಬಿಜೆಪಿ ಫಾರ್‌ ಕರ್ನಾಟಕದ ನಾಯಕರೇ ಗುಜರಾತಿನ ಫಲಿತಾಂಶದಿಂದಷ್ಟೇ ಹಿಮಾಚಲ ಪ್ರದೇಶದ ಫಲಿತಾಂಶವನ್ನು ನೋಡಿ. ಹಿಮಾಚಲ ಪ್ರದೇಶದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್‌ ಶೋ ಫ್ಲಾಪ್‌ ಅದದ್ದು ಏಕೆ. ತವರಿಗೆ ಮಾತ್ರ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಭಾವ ಸೀಮಿತವಾಗಿದೆಯಲ್ಲವೇ ಎಂದು ಕುಟುಕಿದೆ.

ಬಿಜೆಪಿಯ ದುರಾಡಳಿತವನ್ನು ಹಿಮಾಚಲ ಪ್ರದೇಶದ ಜನತೆ ಹೇಗೆ ತಿರಸ್ಕರಿಸಿದ್ದಾರೋ ಹಾಗೆಯೇ ಕರ್ನಾಟಕದಲ್ಲೂ ಬಿಜೆಪಿಯನ್ನು ಕಸದ ಬುಟ್ಟಿಗೆ ಎಸೆಯುತ್ತಾರೆ ಎಂದು ತಿರುಗೇಟು ನೀಡಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next