ಬೆಂಗಳೂರು: ಬಿಜೆಪಿ ಕಾರ್ಯಕ್ರಮದಲ್ಲಿ ಸಂಸದರಾದ ತೇಜಸ್ವಿ ಸೂರ್ಯ, ಪಿ.ಸಿ.ಮೋಹನ್ ಜತೆ ರೌಡಿ ಶೀಟರ್ ಆರೋಪ ಹೊತ್ತಿದ್ದ ಸೈಲೆಂಟ್ ಸುನಿಲ್ ಉಪಸ್ಥಿತಿ, ಫೈಟರ್ ರವಿ ಬಿಜೆಪಿ ಸೇರ್ಪಡೆಗೆ ಕಾಂಗ್ರೆಸ್ ಟ್ವೀಟ್ ಮೂಲಕ ಕುಟುಕಿದೆ.
ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಸಿಸಿಬಿ ಪೊಲೀಸರ ಕೈಗೆ ಸಿಗದ ರೌಡಿ ಬಿಜೆಪಿ ಫಾರ್ ಕರ್ನಾಟಕದ ನಾಯ ಕರ ಕೈಗೆ ಸಿಕ್ಕಿದ್ದು ಹೇಗೆ ಎಂದು ಪ್ರಶ್ನಿಸಿದೆ. ಕ್ರಿಮಿನಲ್‌ಗಳೊಂದಿಗೆ ಬಿಜೆಪಿ ನೆಂಟಸ್ಥಿಕೆ ಇರುವಾಗ ರಾಜ್ಯ ದಲ್ಲಿ ಅಪರಾಧ ಪ್ರಕರಣ ಸಂಖ್ಯೆ ಏರ ದಿರುತ್ತದೆಯೇ ಎಂದು ಪ್ರಶ್ನಿಸಿದೆ.
ಬಿಜೆಪಿಯ ಕೃಪಾಕಟಾಕ್ಷದಿಂದ ಸೈಲೆಂಟ್ ಸುನಿಲ್ ಎಂಬ ರೌಡಿಯ ಮುಂದೆ ಈಗ ಪೊಲೀಸರೇ ಸೈಲೆಂಟ್ ಆಗಿದ್ದಾರೆ. ಸಚಿವ ಆರಗ ಜ್ಞಾನೇಂದ್ರ ಅವರೇ, ಸೈಲೆಂಟ್ ಸುನಿಲ್‌ನನ್ನು ಪೊಲೀಸರು ಹುಡುಕುತ್ತಿರಲಿಲ್ಲವೇ? ಬಿಜೆಪಿ ನಾಯಕರೊಂದಿಗೆ ವೇದಿಕೆ ಯಲ್ಲಿದ್ದಾಗ ಅಲ್ಲಿ ಪೊಲೀಸರು ಇರಲಿಲ್ಲವೇ ಎಂದು ಪ್ರಶ್ನಿಸಿದೆ.
ಸುನಿಲ್ ಚಾಮರಾಜಪೇಟೆಯಿಂದ ಹಾಗೂ ಫೈಟರ್ ರವಿ ನಾಗಮಂಗಲ ಕ್ಷೇತ್ರದಿಂದ ಬಿಜೆಪಿಯ ಟಿಕೆಟ್ ಬಯಸಿದ್ದಾರೆ ಎಂದು ಹೇಳಲಾಗಿದೆ.
ಡಾ| ಅಶ್ವತ್ಥ್ ಸಮರ್ಥನೆ
ಸಮಾಜದಲ್ಲಿ ಗೌರವಯುತವಾಗಿ ಬಾಳಬೇಕು ಎಂದು ಆಶಯ ಹೊಂದಿರುವವರಿಗೆ ಅವಕಾಶ ನೀಡ ಬೇಕು. ಎಲ್ಲರನ್ನೂ ಒಂದೇ ರೀತಿ ನೋಡುವುದು ಸರಿಯಲ್ಲ ಎಂದು ಸಚಿವ ಡಾ| ಅಶ್ವತ್ಥನಾರಾಯಣ ಸಮರ್ಥಿಸಿಕೊಂಡಿದ್ದಾರೆ.