Advertisement
ಯಾತ್ರೆ ಆರಂಭವಾಗುವ ತುಮಕೂರು ರಸ್ತೆಯ ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದ ಆವರಣದಲ್ಲಿ ಭಾನುವಾರ ಸಿದ್ಧತೆಗಳಿಗೆ ಭೂಮಿ ಪೂಜೆ ನೆರವೇರಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 75 ದಿನ ನಡೆಯುವ ಯಾತ್ರೆಯಲ್ಲಿ ಪ್ರತಿನಿತ್ಯ ಕಾಂಗ್ರೆಸ್ ಸರ್ಕಾರದ ಹಗರಣಗಳನ್ನು ಬಯಲಿಗೆಳೆಯುವ ಮೂಲಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮತ್ತು ಆ ಪಕ್ಷದ ವರಿಷ್ಠರಿಗೆ ಸವಾಲು ಹಾಕುವ ಕೆಲಸ ಮಾಡಲಾಗುತ್ತದೆ. ಆ ಮೂಲಕ ನವ ಕರ್ನಾಟಕ ನಿರ್ಮಾಣವಾಗಬೇಕಾದರೆ ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಾಣ ಆಗಬೇಕು ಎಂಬ ಸಂದೇಶವನ್ನು ರಾಜ್ಯಾದ್ಯಂತ ಸಾರುತ್ತೇವೆ ಎಂದು ತಿಳಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ಬಿಜೆಪಿಯ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆಯುವ ಯಾತ್ರೆಯಲ್ಲಿ ಪಕ್ಷದ ಎಲ್ಲಾ ಮುಖಂಡರು ಒಗ್ಗಟ್ಟಿನಿಂದ ಪಾಲ್ಗೊಳ್ಳಲಿದ್ದಾರೆ. ಅಲ್ಲದೆ, ಯಾತ್ರೆಯಲ್ಲಿ ಪ್ರತಿನಿತ್ಯ ಒಬ್ಬ ಪಕ್ಷದ ರಾಷ್ಟ್ರೀಯ ನಾಯಕ ಅಥವಾ ಕೇಂದ್ರ ಸಚಿವ ಇಲ್ಲವೇ ಇತರೆ ರಾಜ್ಯಗಳ ಬಿಜೆಪಿ ಮುಖ್ಯಮಂತ್ರಿ ಅಥವಾ ಪ್ರತಿಪಕ್ಷ ನಾಯಕ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
Related Articles
Advertisement
ಬಿಜೆಪಿಯು ಭವಿಷ್ಯ ಮತ್ತು ಯುವಕರನ್ನು ಪ್ರತಿನಿಧಿಸುತ್ತದೆ. ಹೀಗಾಗಿ ಬೈಕ್ ರ್ಯಾಲಿ ಮೂಲಕ ಯಾತ್ರೆಗೆ ಬರುವವರೆಲ್ಲರೂ 35 ವರ್ಷದೊಳಗಿನವರೇ ಆಗಿರುತ್ತಾರೆ ಎಂದ ಮುರಳೀಧರರಾವ್, ಬೈಕ್ ರ್ಯಾಲಿಯಲ್ಲಿ ಬರುವವರು ವಾಪಸ್ ತೆರಳುವಾಗ ಬಿಜೆಪಿ ಅಧಿಕಾರಕ್ಕೆ ಬಂದರೆ ನವ ಕರ್ನಾಟಕ ನಿರ್ಮಾಣ ಹೇಗೆ ಆಗುತ್ತದೆ ಎಂಬ ಸಂದೇಶವನ್ನು ಕೊಂಡೊಯ್ದು ಅದನ್ನು ಜನರಿಗೆ ತಲುಪಿಸಲಿದ್ದಾರೆ ಎಂದರು.
ವಿಧಾನಸಭೆ ಪ್ರತಿಪಕ್ಷ ಉಪನಾಯಕ ಆರ್.ಅಶೋಕ್ ಮಾತನಾಡಿ, ಪರಿವರ್ತನಾ ಯಾತ್ರೆ 2018ರ ವಿಧಾನಸಭಾ ಚುನಾವಣೆಯ ಪೂರ್ವತಯಾರಿ ಆಗಿದ್ದು, ಈ ಮೂಲಕ ಚುನಾವಣಾ ರಣಕಹಳೆ ಮೊಳಗಿಸಲಾಗುವುದು. ಜತೆಗೆ ಕಾಂಗ್ರೆಸ್ ಮುಕ್ತ ಕರ್ನಾಟಕದ ಸಂದೇಶ ರವಾನಿಸುವ ಮೂಲಕ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮುಂಬರುವ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ವೇದಿಕೆ ಸೃಷ್ಟಿಸಲಾಗುವುದು ಎಂದರು.
ಯಾತ್ರೆ ಉದ್ಘಾಟನೆ ಸಿದ್ಧತೆಗೆ ಭೂಮಿಪೂಜೆನವ ಕರ್ನಾಟಕ ನಿರ್ಮಾಣದ ಘೋಷಣೆಯೊಂದಿಗೆ ಅ. 2ರಿಂದ ಬಿಜೆಪಿ ಹಮ್ಮಿಕೊಂಡಿರುವ ಪರಿವರ್ತನಾ ರಥಯಾತ್ರೆಯ ಉದ್ಘಾಟನಾ ಸಮಾರಂಭಕ್ಕಾಗಿ ತುಮಕೂರು ರಸ್ತೆಯ ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಭಾನುವಾರ ಭೂಮಿ ಪೂಜೆ ನೆರವೇರಿಸಲಾಯಿತು. ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಪರಿವರ್ತನಾ ಯಾತ್ರೆ ಬೆಂಗಳೂರು ಕಾರ್ಯಕ್ರಮದ ಉಸ್ತುವಾರಿಯೂ ಆಗಿರುವ ವಿಧಾನಸಭೆ ಪ್ರತಿಪಕ್ಷ ಉಪನಾಯಕ ಆರ್.ಅಶೋಕ್, ಯಾತ್ರೆಯ ಸಂಚಾಲಕಿಯೂ ಆಗಿರುವ ಸಂಸದೆ ಶೋಭಾ ಕರಂದ್ಲಾಜೆ, ಸಂಸದ ಪಿ.ಸಿ.ಮೋಹನ್, ಶಾಸಕರಾದ ವೈ.ಎ.ನಾರಾ.ಣಸ್ವಾಮಿ, ಎಸ್.ಆರ್.ವಿಶ್ವನಾಥ್, ಮುನಿರಾಜು, ವಿ.ಸೋಮಣ್ಣ ಮತ್ತಿತರರು ಪಾಲ್ಗೊಂಡಿದ್ದರು.ಯಾತ್ರೆಯ ಉದ್ಘಾಟನಾ ಸಮಾರಂಭಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಚಾಲನೆ ನೀಡಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡುವರು. ಅದಕ್ಕಾಗಿ ಬೃಹತ್ ವೇದಿಕೆ ಸಿದ್ಧಪಡಿಸಲಾಗುತ್ತದೆ. ಅದೇ ರೀತಿ ರಾಜ್ಯದ ಅರ್ಧ ಭಾಗದ 27 ಸಾವಿರ ಬೂತ್‌ಗಳಿಂದ ಪ್ರತಿ ಬೂತ್‌ನಿಂದ ಮೂರು ಬೈಕ್‌ಗಳಲ್ಲಿ ತಲಾ ಆರು ಮಂದಿ ಆಗಮಿಸುವರು. ಇದರೊಂದಿಗೆ ಇತರೆ ವಾಹನಗಳಲ್ಲಿ ಕಾರ್ಯಕರ್ತರು ಆಗಮಿಸುತ್ತಿದ್ದು, ಒಟ್ಟಾರೆ ಮೂರು ಲಕ್ಷ ಮಂದಿ ಆಗಮಿಸುವ ನಿರೀಕ್ಷೆಯೊಂದಿಕೆ ಅವರಿಗೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗುತ್ತಿದೆ. ಈ ಎಲ್ಲಾ ಪ್ರಕ್ರಿಯೆಗಳು ಭೂಮಿ ಪೂಜೆಯೊಂದಿಗೆ ಆರಂಭವಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್, ಮಹಿಳೆಯರಿಗೆ ಸುರಕ್ಷತೆ, ಎಲ್ಲರಿಗೂ ಸ್ವಾತಂತ್ರÂ ಕಲ್ಪಿಸುವ ಮತ್ತು ಮೂಲಭೂತವಾದಕ್ಕೆ ಅವಕಾಶ ಇಲ್ಲದ ನವ ಕರ್ನಾಟಕ ನಿರ್ಮಾಣ ಬಿಜೆಪಿ ಹಮ್ಮಿಕೊಂಡಿರುವ ನವ ಕರ್ನಾಟಕ ನಿರ್ಮಾಣ ಪರಿವರ್ತನಾ ರಥಯಾತ್ರೆಯ ಗುರಿ ಎಂದು ಹೇಳಿದರು. ಲಾಂಛನ ಬಿಡುಗಡೆ ಇಂದು
ಬೆಂಗಳೂರು: ಬಿಜೆಪಿ ನ. 2ರಿಂದ ಹಮ್ಮಿಕೊಂಡಿರುವ ನವ ಕರ್ನಾಟಕ ನಿರ್ಮಾಣ ಪರಿವರ್ತನಾ ರಥಯಾತ್ರೆಯ ಲಾಂಛನ ಮತ್ತು ಯಾತ್ರೆಯ ಮಾರ್ಗಸೂಚಿ ಸೋಮವಾರ ಬಿಡುಗಡೆಯಾಗಲಿದೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಮಧ್ಯಾಹ್ನ 1.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆಯುವ ಯಾತ್ರೆಯ ಲಾಂಛನವನ್ನು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅನಾವರಣಗೊಳಿಸುವರು. ಇದೇ ವೇಳೆ ಯಾತ್ರೆಯ ಮಾರ್ಗಸೂಚಿಯನ್ನು ಅದರ ಸಂಚಾಲಕರೂ ಆಗಿರುವ ಶೋಭಾ ಕರಂದ್ಲಾಜೆ ಬಿಡುಗಡೆ ಮಾಡುವರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ಶಾಸಕ ಅರವಿಂದ ಲಿಂಬಾವಳಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.