Advertisement
ಎಐಸಿಸಿ ಅಧ್ಯಕ್ಷ ಖರ್ಗೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಸಿಎಂ, ಡಿಸಿಎಂ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಸಲ್ಲಿಸಿದರೂ ಹೆಚ್ಚಿನ ಚರ್ಚೆ ನಡೆದಿಲ್ಲ. ಸಿಎಂ, ಡಿಸಿಎಂ ಬೆಂಗಳೂರಿಗೆ ವಾಪಸಾದರೂ ಟಿಕೆಟ್ ಆಕಾಂಕ್ಷಿಗಳ ದಂಡು ಮಾತ್ರ ದಿಲ್ಲಿಯಲ್ಲೇ ಬೀಡು ಬಿಟ್ಟು ಲಾಬಿ ಮುಂದುವರಿಸಿದೆ.
Related Articles
300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ದಿಲ್ಲಿ ನಾಯ ಕರ ಜತೆ ಚರ್ಚಿಸಿ 65 ಸಂಭಾವ್ಯರ ಪಟ್ಟಿಯನ್ನು ಹೈಕಮಾಂಡ್‌ಗೆ ಸಲ್ಲಿಸಿ ಬಂದಿದ್ದೇವೆ. ಯತೀಂದ್ರ ವಿಷಯವಾಗಿ ಹೈಕಮಾಂಡ್ ನಾಯಕರು ಈಗಾಗಲೇ ಮಾತು ಕೊಟ್ಟಿದ್ದರು. ಎಲ್ಲ ವಲಯ ಗಳಿಂದಲೂ ಟಿಕೆಟ್ ಆಕಾಂಕ್ಷಿಗಳಿ¨ªಾರೆ. ಮಂಗಳೂರಿ ನಲ್ಲಿ 21, ಚಿಕ್ಕಮಗಳೂರಿನಲ್ಲಿ 9 ಮಂದಿ ಇದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಪರಮೇಶ್ವರ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ನಾವು ಅವರ ಅಭಿಪ್ರಾಯ ಕೇಳಿದ್ದೇವೆ. ಪರಮೇಶ್ವರ ಅವರು ಸಿಎಂ ಅವರನ್ನು ಭೇಟಿ ಮಾಡಿ¨ªಾರೆ. ಹೈಕಮಾಂಡ್ ನಾಯಕರು ಅಂತಿಮ ತೀರ್ಮಾನ ಮಾಡಲಿದ್ದಾರೆ ಎಂದರು.
Advertisement