Advertisement
ಉಪ ಚುನಾವಣೆಯ ಸೋಲಿನ ಪರಾಮರ್ಶೆ ಮತ್ತು ಪಕ್ಷ ಸಂಘಟನೆ ಕುರಿತು ಸೋಮವಾರ ಹಿರಿಯ ನಾಯಕರ ಸಭೆ ನಡೆಸಲಾಗಿದೆ. ಸೋಲಿಗೆ ಆಂತರಿಕ ಕಚ್ಚಾಟವೇ ಕಾರಣ ಎಂದು ಮಾಜಿ ಸ್ಪೀಕರ್ ಕೆ.ಬಿ. ಕೋಳಿವಾಡ, ಕೆ.ಎನ್. ರಾಜಣ್ಣ ಸಹಿತ ಹಿರಿಯ ನಾಯಕರು ಈ ಸಭೆಯಲ್ಲಿ ನೇರವಾಗಿ ಆರೋಪಿಸಿದ್ದಾರೆ.
ವಿಧಾನಸಭೆ ಚುನಾವಣೆಗೆ ಇನ್ನೂ ಎರಡೂವರೆ ವರ್ಷ ಇದೆ. ಈಗಲೇ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ಏಕೆ? ಆ ಬಣ ಈ ಬಣ ಎಂದು ಹೇಳುವುದನ್ನು ಬಿಟ್ಟು ಕಾಂಗ್ರೆಸ್ ಬಣ ಎಂದು ಹೇಳುವಂತೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿ. ಬೆಂಬಲಿಗರಿಗೆ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಗಾಂಧಿ ಹಿಂದುತ್ವಕ್ಕೆ ಕಾಂಗ್ರೆಸ್ ಜೈ
ಬಿಜೆಪಿಯವರು ಸಾವರ್ಕರ್ ಹಿಂದುತ್ವ ಪ್ರತಿಪಾದಿಸುತ್ತಿದ್ದಾರೆ. ನಾವು ಗಾಂಧೀಜಿ ಹಿಂದುತ್ವವನ್ನು ಬಿಂಬಿಸಬೇಕು. ಈ ಬಗ್ಗೆ ಜನರಿಗೆ ಅರ್ಥ ಮಾಡಿಸುವಲ್ಲಿ ನಾವು ವಿಫಲವಾಗಿದ್ದೇವೆ ಎಂದು ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್ ಹೇಳಿದ್ದಾರೆ ಎಂದು ತಿಳಿದು ಬಂದಿದೆ.
Related Articles
ದಲಿತರು ಕಾಂಗ್ರೆಸ್‌ನಿಂದ ದೂರವಾಗುತ್ತಿದ್ದಾರೆ ಎನ್ನುವ ಬಗ್ಗೆಯೂ ಕೈ ನಾಯಕರ ಸಭೆಯಲ್ಲಿ ಗಂಭೀರ ಚರ್ಚೆಯಾಗಿದ್ದು, ಮಾಜಿ ಡಿಸಿಎಂ ಡಾ| ಪರಮೇಶ್ವರ್ ವಿರುದ್ಧ ಕೆಲವು ನಾಯಕರು ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಪರಮೇಶ್ವರ್ ಕೂಡ ಗರಂ ಆಗಿ ಉತ್ತರ ನೀಡಿದ್ದಾರೆ ಎನ್ನಲಾಗಿದೆ.
Advertisement
ಮೂಲ-ವಲಸಿಗ ಬಿರುಕು ಬೇಡಮೂಲ ಮತ್ತು ವಲಸಿಗ ಎನ್ನುವ ತಾರತಮ್ಯ ಮಾಡಿದರೆ ಒಗ್ಗಟ್ಟು ಮೂಡುವುದು ಹೇಗೆ? ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಪಕ್ಷವನ್ನು ಅಧಿಕಾರಕ್ಕೆ ತರಲು ಸಾಧ್ಯ. ಮೊದಲು ಆ ಕೆಲಸ ಮಾಡಿ, ಅನಂತರ ಸಿಎಂ ಯಾರು ಎಂದು ನಿರ್ಧಾರವಾಗುತ್ತದೆ ಎಂದು ಮಾಜಿ ಸ್ಪೀಕರ್ ಕೋಳಿವಾಡ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ.