ಚಿಕ್ಕೋಡಿ: ಸರಕಾರಕ್ಕೆ ಕೆಟ್ಟ ಹೆಸರು ತರಲು ಹಾಗೂ ಐದು ರಾಜ್ಯದ ಚುನಾವಣಾ ಹಿನ್ನೆಲೆ ಕಾಂಗ್ರೆಸ್ ರೈತರನ್ನು ಪ್ರಚೋದಿಸುತ್ತಿದೆ. ಸ್ವಾತಂತ್ರ್ಯ ಬಂದ ನಂತರ ಎಂದೂ ಈ ರೀತಿ ರೈತರು ಪ್ರತಿಭಟನೆ ಮಾಡಿಲ್ಲ ಎಂದು ಸಚಿವ ಬಿ. ಶ್ರೀರಾಮುಲು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಹಂಚನಾಳ ಗ್ರಾಮದಲ್ಲಿ ದೆಹಲಿಯಲ್ಲಿನ ರೈತರ ಪ್ರತಿಭಟನೆ-ಹಿಂಸಾಚಾರಾದ ಕುರಿತಾಗಿ ಮಾತನಾಡಿದ ಅವರು, ಚುನಾವಣೆ ಗೆಲ್ಲಲು, ರೈತರ ಬೆಂಬಲ ಪಡೆಯಲು ಕಾಂಗ್ರೆಸ್ ಪಕ್ಷ ಈ ರೀತಿ ಪ್ರಚೋದನೆ ನೀಡಿ ಷಡ್ಯಂತ್ರ ಮಾಡುತ್ತಿದೆ ಎಂದು ಕಿಡಿಕಾರಿದರು.
ಇದನ್ನೂ ಓದಿ: ‘ಪಾಕಿಸ್ತಾನ್ ಜಿಂದಾಬಾದ್’ ಎಂದವರು ರೈತ ಹೋರಾಟದಲ್ಲಿ ಭಾಗಿಯಾಗಿದ್ದಾರೆ: ಶೋಭಾ ಕರಂದ್ಲಾಜೆ
ಕಾಂಗ್ರೆಸ್ ದೇಶದಲ್ಲಿ ಹಾಗೂ ರಾಜ್ಯದಲ್ಲಿ ಧೂಳಿಪಟವಾಗುತ್ತಿದೆ. ಕಾಂಗ್ರೆಸ್ ನಾಯಕರು ನಿರುದ್ಯೋಗಿಗಳಾಗಿದ್ದಾರೆ, ಹತಾಶೆಯಿಂದ ಈ ರೀತಿ ಮಾಡುತ್ತಿದ್ದಾರೆ. ನಿನ್ನೆಯ ದೆಹಲಿ ರೈತರ ಗಲಾಟೆ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖಾ ವರದಿ ಬಂದ ನಂತರ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು.
ರೈತರ ಜೊತೆ ಹನ್ನೊಂದು ಬಾರಿ ಸರಕಾರ ಸಭೆ ನಡೆಸಿದೆ. ರೈತರು ಸಮಾಧಾನವಾಗಿದ್ದರು, ಆದರೆ ಕಾಂಗ್ರೆಸ್ ಗೆ ನಿರುದ್ಯೋಗ ಕಾಡುತ್ತಿದೆ ಎಂದು ಶ್ರೀರಾಮುಲು ತಿಳಿಸಿದ್ದಾರೆ.
ಇದನ್ನೂ ಓದಿ: ಭಾರತದ ಈ ನಗರದಲ್ಲಿ ‘100 ರೂ. ದಾಟಿದ ಪ್ರತಿ ಲೀಟರ್ ಪೆಟ್ರೋಲ್ ಬೆಲೆ .?’