Advertisement
ಕೆಪಿಸಿಸಿ ಕಾರ್ಯಾಧ್ಯಕ್ಷ ಶಾಸಕ ಈಶ್ವರ ಖಂಡ್ರೆ ಮತ್ತು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಸವರಾಜ ಜಾಬಶೆಟ್ಟಿ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ರಾಷ್ಟ್ರಪತಿಗಳಿಗೆ ಬರೆದ ಮನವಿ ಪತ್ರ ಜಿಲ್ಲಾಡಳಿತಕ್ಕೆ ಸಲ್ಲಿಸಿದರು.
Related Articles
Advertisement
ಶಾಸಕ ರಹೀಮ್ ಖಾನ್ ಮಾತನಾಡಿ, ಹತ್ರಾಸ್ ಅತ್ಯಾಚಾರ ಪ್ರಕರಣ ದೇಶವೇ ತಲೆ ತಗ್ಗಿಸುವಂಥದ್ದು. ಅಲ್ಲಿನ ಜನಪ್ರತಿನಿಧಿಗಳು, ಅಧಿಕಾರಿಗಳು ಸಂತ್ರಸ್ತರ ಬೆನ್ನಿಗೆ ನಿಲ್ಲುವ ಬದಲು ಆರೋಪಿಗಳೊಂದಿಗೆ ನಿಂತಿದ್ದಾರೆ. ರಾತ್ರೋರಾತ್ರಿ ಶವ ಸುಟ್ಟು ಹಾಕಿದ್ದಾರೆ. ತೆಲಂಗಾಣದಲ್ಲಿ ಅತ್ಯಾಚಾರ ಆರೋಪಿಗಳಿಗೆ ಶೂಟೌಟ್ ಮಾಡಿದಂತೆ ಅಲ್ಲೂ ಮಾಡಬೇಕಿತ್ತು. ದೇಶದಲ್ಲಿ ಎಲ್ಲೂ ಇನ್ನೂ ಒಳ್ಳೆಯ ದಿನಗಳೇ ಬಂದಿಲ್ಲ, ಹೀಗಾಗಿ, ನಮಗೆ ಹಳೆಯ ದಿನಗಳೇ ಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಸವರಾಜ ಜಾಬಶೆಟ್ಟಿ, ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ, ಮಾಜಿ ಎಂಎಲ್ಸಿ ಕೆ. ಪುಂಡಲೀಕರಾವ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ, ಅಮೃತರಾವ್ ಚಿಮಕೋಡೆ ಇತರರು ಇದ್ದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ರಾಜ್ಯದಲ್ಲಿ ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಹತ್ತಿಕ್ಕಲು ಮತ್ತು ಕಷ್ಟ ಕೊಡಲು ಬಿಜೆಪಿ ಸರ್ಕಾರ ಸಿಬಿಐ ದಾಳಿ ಮೂಲಕ ಷಡ್ಯಂತ್ರ ನಡೆಸಿದೆ. ತನಿಖೆ ನೆಪದಲ್ಲಿ ವಿರೋಧ ಪಕ್ಷಗಳ ಧ್ವನಿ ಅಡಗಿಸುವ ಕೆಲಸ ಮಾಡುತ್ತಿದೆ. ಆದರೆ ಇಂಥ ಹೆದರಿಕೆಗೆ ಕಾಂಗ್ರೆಸ್ ಬಗ್ಗಲ್ಲ. ಕಾಂಗ್ರೆಸ್ ರಾಜಕೀಯ ಪಕ್ಷವಲ್ಲ; ಇದೊಂದು ಆಂದೋಲನ. ಸಿಬಿಐ ಸ್ವತಂತ್ರ ತನಿಖಾ ಸಂಸ್ಥೆಯಾಗಿದ್ದು, ಒಂದು ಪಕ್ಷದ ಏಜೆಂಟರಂತೆ ವರ್ತಿಸಿದರೆ ಕಪ್ಪು ಚುಕ್ಕೆ ಅಂಟಿಕೊಳ್ಳಲಿದೆ. ಸಿಬಿಐ ನ್ಯಾಯಯುತ ತನಿಖೆ ನಡೆಸಲಿ. ನೆಲದ ಕಾನೂನು ಮೇಲೆ ಯಾರೂ ಇಲ್ಲ. ಇಲ್ಲವಾದರೆ ಜನಾಂದೋಲನ ಆರಂಭವಾಗುತ್ತದೆ. –ಈಶ್ವರ ಖಂಡ್ರೆ, ಕೆಪಿಸಿಸಿ ಕಾರ್ಯಾಧ್ಯಕ್ಷ