ನವದೆಹಲಿ: ಕಾಂಗ್ರೆಸ್‌ನ ಮಾಜಿ ಅಧಿನಾಯಕಿ ಸೋನಿಯಾ ಗಾಂಧಿ ಅವರು ಉಸಿರಾಟ ಸಂಬಂಧಿ ಸಮಸ್ಯೆಯಿಂದಾಗ ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯ ವರದಿಗಳ ಪ್ರಕಾರ ಸೋನಿಯಾ ಅವರು ಆರೋಗ್ಯವಂತರಾಗಿದ್ದಾರೆ ಎಂದು ತಿಳಿದುಬಂದಿದೆ.
76 ವರ್ಷದ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಗುರುವಾರ ಅವರನ್ನು ಆಸ್ಪತ್ರೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಆಸ್ಪತ್ರೆಯ ವಕ್ತಾರರು ತಿಳಿಸಿದ್ದಾರೆ.
ಸೋನಿಯಾ ಗಾಂಧಿ ಅವರನ್ನ ಆಸ್ಪತ್ರೆಯ ಹಿರಿಯ ವೈದ್ಯ ಅರೂಪ್ ಬಸು ಮತ್ತು ಅವರ ತಂಡದಿಂದ ಎದೆ ತಪಾಸಣೆ ನಡೆಸಲಾಗುತ್ತಿದೆ ಎಂದು ಸರ್ ಗಂಗಾ ರಾಮ್ ಆಸ್ಪತ್ರೆ ಸೊಸೈಟಿ ಟ್ರಸ್ಟ್‌ನ ಮುಖ್ಯಸ್ಥರಾದ ಡಿ.ಎಸ್ ರಾಣಾ ತಿಳಿಸಿದ್ದಾರೆ. ಸೋನಿಯಾ ಅವರು ಜ್ವರದಿಂದ ಬಳಲುತ್ತಿದ್ದಾರೆ ಎಂದೂ ಮಾಹಿತಿ ನೀಡಿದ್ದಾರೆ.
ಅವರನ್ನು ತೀವ್ರ ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿದೆ. ಸದ್ಯಕ್ಕೆ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ತಿಳಿಸಿದೆ.
Related Articles
ಕೇವಲ ಒಂದು ವರ್ಷದ ಒಳಗೆ ಸೋನಿಯಾ ಗಾಂಧಿ ಅವರು ಎರಡನೇ ಬಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜನವರಿಯಲ್ಲಿ ಸೋನಿಯಾ ಅವರಿಗೆ ಉಸಿರಾಟದ ತೊಂದರೆ ಕಂಡುಬಂದಿದ್ದರಿಂದ ಅವರನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದನ್ನೂ ಓದಿ: ಪೆಗಾಸಸ್ ಅವರ ಮನಸ್ಸಿನಲ್ಲಿದೆ… : ರಾಹುಲ್ ಗಾಂಧಿ ಆರೋಪದ ಬಗ್ಗೆ ಅನುರಾಗ್ ಕಿಡಿ