Advertisement
ಬುಧವಾರ ಅಂಚೆಪಾಳ್ಯ ಬಳಿ ಕಾಂಗ್ರೆಸ್ ಕಾರ್ಯಕರ್ತ ಬೋರೇಗೌಡ ಎಂಬುವರು ಜೆಡಿಎಸ್ ಕಾರ್ಯಕರ್ತ ಮಂಜುನಾಥ್ ಅವರಿಗೆ ಚಾಕುವಿನಿಂದ ಹಣೆಗೆ ಚುಚ್ಚಿ ಗಾಯಗೊಳಿಸಿದ್ದಾನೆ ಎಂದು ಆರೋಪಿಸಿ ಮಂಜುನಾಥ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ಇಂದು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು, ಈ ಘಟನೆಯನ್ನು ಬಿಜೆಪಿ, ಜೆಡಿಎಸ್ ಮುಖಂಡರು ತೀವ್ರವಾಗಿ ಖಂಡಿಸಿ, ಕಾಂಗ್ರೆಸ್ ನಾಯಕರ ವಿರುದ್ದ ವಾಗ್ದಾಳಿ ನಡೆಸಿದ್ದರು.
Related Articles
Advertisement
ತಾಲೂಕಿನ ನಡೆಮಾವಿನಪುರ ಬಳಿ ನಡೆದ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ಕಾಂಗ್ರೆಸ್ ಕಾರ್ಯಕರ್ತ ಕೀರ್ತಿ ಎಂಬುವರಿಗೆ ಬಿಜೆಪಿ ಕಾರ್ಯಕರ್ತರಾದ ಚಂದ್ರ, ಜಗದೀಶ್, ಸುನೀಲ್ ಎಂಬುವರು ಚಾಕು ಮತ್ತು ದೋಣೆಯಿಂದ ಹಲ್ಲೆ ನಡೆಸಿದರು ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಕೀರ್ತಿ ತಿಳಿಸಿದರು ಈ ಹಿನ್ನಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದರು, ಇದನ್ನು ಶಾಸಕ ಡಾ.ಹೆಚ್.ಡಿ.ರಂಗನಾಥ್ ಆದಿಯಾಗಿ ಪಕ್ಷದ ಕಾರ್ಯಕರ್ತರು ಘಟನೆಯನ್ನು ಖಂಡಿಸಿ ಬಿಜೆಪಿ ನಾಯಕರ ವಿರುದ್ದ ವಾಗ್ದಾಳಿ ನಡೆಸಿದ್ದರು. ಆದರೆ ಶುಕ್ರವಾರ ಕೀರ್ತಿ ಪೊಲೀಸ್ ಠಾಣೆಗೆ ಬೇಟಿ ನೀಡಿ ನನಗೆ ಚಾಕುವಿನಿಂದ ಮತ್ತು ದೊಣ್ಣೆಯಿಂದ ಹಲ್ಲೆ ನಡೆಸಿಲ್ಲ. ಹಣಕಾಸು ವಿಚಾರವಾಗಿ ನನಗೆ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಯಾಗಿ ಅವರು ನನ್ನ ಮೇಲೆ ಕೈ ಯಿಂದ ಹಲ್ಲೆ ನಡೆಸಿ ಗಾಯಗೊಳಿಸಿದ್ದಾರೆ ಎಂದು ತಿಳಿಸಿದ್ದಾರೆ.