Advertisement
ನಗರದ ಲಲಿತಮಹಲ್ ಪ್ಯಾಲೇಸ್ ಹೋಟೆಲ್‌ನಲ್ಲಿ ನಡೆದ ಬಿಜೆಪಿ ದಲಿತ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮೊದಲಿನಿಂದಲೂ ವಂಶ ಪಾರಂಪರ್ಯ ಆಡಳಿತ ನಡೆಸಿಕೊಂಡು ಬಂದಿದೆ.
Related Articles
Advertisement
ಬಿಜೆಪಿ ಎಸ್‌ಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಲಾಲ್‌ಸಿಂಗ್ ಆರ್ಯ, ಕೇಂದ್ರ ಸಚಿವ ವೀರೇಂದ್ರ ಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಬಿಜೆಪಿ ಎಸ್.ಸಿ.ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ, ಮೈಸೂರು ನಗರಾಧ್ಯಕ್ಷ ಟಿ.ಎಸ್. ಶ್ರೀವತ್ಸ, ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್ ಇದ್ದರು.
ಕಾರ್ಯಕಾರಿಣಿ ನಿರ್ಣಯಗಳುಪ್ರಮುಖವಾಗಿ ಪ.ಜಾತಿ ಮತ್ತು ಪ.ಪಂಗಡ ಸಮುದಾಯದ ಮೀಸಲಾತಿ ಹೆಚ್ಚಳ, ಕೇಂದ್ರ ಸರ್ಕಾರ ಅಂಬೇಡ್ಕರ್ ಜನ್ಮಸ್ಥಳ, ಬೌದ್ಧ ಧರ್ಮ ಸ್ವೀಕರಿಸಿದ ಸ್ಥಳ ಅಭಿವೃದ್ಧಿಪಡಿಸಿದಂತೆ ರಾಜ್ಯದಲ್ಲಿ ಅಂಬೇಡ್ಕರ್ ಭೇಟಿ ನೀಡಿದ ಏಳು ಸ್ಥಳಗಳಾದ ಬೆಂಗಳೂರು, ಕೆಜಿಎಫ್, ಧಾರವಾಡ, ಹಾಸನ, ವಿಜಯಪುರ, ಬೆಳಗಾವಿ ಮತ್ತು ಗುಲ್ಬರ್ಗಾ ನಗರಗಳಲ್ಲಿ ಸ್ಮಾರಕ ನಿರ್ಮಾಣಕ್ಕೆ ಪ್ರಾರಂಭಿಕ ಅನುದಾನವಾಗಿ 20 ಕೋಟಿ ನೀಡಿರುವುದು, ಬಡವರಿಗೆ 75 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡಿರುವುದು, ರಾಜ್ಯದಲ್ಲಿ ದಲಿತರಿಗಾಗಿ 100 ಹಾಸ್ಟೆಲ್ ತೆರೆಯಲು ಅನುದಾನ ಬಿಡುಗಡೆಗೊಳಿಸಿರುವುದನ್ನು ಸ್ವಾಗತಿಸಲಾಗಿದೆ ಎಂದರು. ಕಾಂಗ್ರೆಸ್‌ನದ್ದು ವಂಶ ಪಾರಂಪರ್ಯ, ಪರಿವಾರ ರಾಜಕಾರಣವಾದರೆ, ನಮ್ಮದು ಅಂಬೇಡ್ಕರ್ ಅವರು ನೀಡಿದ ಸಂವಿಧಾನ ಆಶಯದ ಆಡಳಿತ.
● ನಳೀನ್ ಕುಮಾರ್ ಕಟೀಲ್,
ರಾಜ್ಯಾಧ್ಯಕ್ಷ ಬಿಜೆಪಿ