Advertisement

ಪರಿಷತ್ ನಲ್ಲಿ‌ ನಡೆದ ಘಟನೆಗೆ ಕಾಂಗ್ರೆಸ್ ಕಾರಣ: ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ

02:17 PM Dec 15, 2020 | keerthan |

ಶಿವಮೊಗ್ಗ: ಇಂದು ಪರಿಷತ್ ನಲ್ಲಿ‌ನಡೆದ ಘಟನೆ ದುರಾದೃಷ್ಟಕರ. ಎಂದೂ ಇಂಥ ಘಟನೆಗಳು‌ ನಡೆಯಬಾರದು. ಇಂದಿನ ಘಟನೆಗೆ ಕಾಂಗ್ರೆಸ್ ಕಾರಣ. ಕಾಂಗ್ರೆಸ್ ಆರಂಭದಲ್ಲಿ ಮಾಡಿದ ತಪ್ಪಿನಿಂದಾಗಿ ಇಂಥ ಘಟನೆ ನಡೆದಿದೆ. ಕಾಂಗ್ರೆಸ್ ಪಕ್ಷ ಹಿಂದಿನಿಂದಲೂ ಈ ರೀತಿಯ ಪ್ರವೃತ್ತಿ ನಡೆಸಿಕೊಂಡು ಬಂದಿದೆ ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ಹೇಳಿದರು.

Advertisement

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಕಲಾಪದಲ್ಲಿಂದು ನಡೆದ ತಳ್ಳಾಟ ಘಟನೆಯನ್ನು ಟೀಕಿಸಿದರು.

ಈ ಹಿಂದೆ ನಾನು ಸಭಾಪತಿಯಾಗಿದ್ದಾಗಲೂ ಇದೇ ಪರಿಸ್ಥಿತಿ ಅನುಭವಿಸಿದ್ದೆ. ನನ್ನ ವಿರುದ್ಧವೂ ಅವಿಶ್ವಾಸ ನಿರ್ಣಯ ಮಂಡಿಸಲಾಗಿತ್ತು. ಆಗ ನಾನು ಸಭಾಪತಿ ಸ್ಥಾನದಿಂದ ಕೆಳಗಿಳಿದು ಬಂದು ಕುಳಿತು ಆ ಸ್ಥಾನದಲ್ಲಿ ಉಪಸಭಾಪತಿಯನ್ನು ಕೂರಿಸಿದ್ದೆ. ಬಳಿಕ ಚುನಾವಣೆ ನಡೆದು ನನಗೆ ಬಹುಮತ ಸಿಕ್ಕಿದಾಗ ಮತ್ತೆ ಸಭಾಪತಿ ಸ್ಥಾನದಲ್ಲಿ ಕುಳಿತಿದ್ದೆ ಎಂದು ಇಂದಿನ ಬಿಜೆಪಿ ನಡೆಯನ್ನು ಸಮರ್ಥಿಸಿಕೊಂಡರು.

ಇದನ್ನೂ ಓದಿ:ಪರಿಷತ್ ಪೀಠಕ್ಕಾಗಿ ತಳ್ಳಾಟ, ಗದ್ಗದಿತರಾದ ಹೊರಟ್ಟಿ:’ಚಿಂತಕರ ಚಾವಡಿ’ಯಲ್ಲಿ ನಡೆದಿದ್ದಿಷ್ಟು

ಕಾಂಗ್ರೆಸ್ ನಾಯಕರು ಅಧಿಕಾರ ನಡೆಸುವುದು ತಮ್ಮ ಆಜನ್ಮ ಸಿದ್ಧ ಹಕ್ಕು ಎಂದುಕೊಂಡಿದ್ದಾರೆ. ನೆಹರೂ ಕುಟುಂಬದವರು ಹಾಗೂ ವಂಶ ಪಾರಂಪರ್ಯವಾಗಿ ಅಧಿಕಾರ ನಡೆಸಬೇಕು ಎಂಬ ಮನೋಭಾವ ಕಾಂಗ್ರೆಸ್ ನವರದ್ದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next