ಅದರಂತೆ ಅಲ್ಲಿನ ಪಕ್ಷದ ಬಂಡಾಯ ಅಭ್ಯರ್ಥಿಗಳ ಮನವೊಲಿಸಿ ಅವರನ್ನು ಕಣದಿಂದ ಹಿಂದೆ ಸರಿಯುವಂತೆ ಮಾಡಲಾಗಿದೆ ಎಂದು ಬೃಹತ್ ನೀರಾವರಿ ಸಚಿವ ಹಾಗೂ ತೆಲಂಗಾಣ ಉಸ್ತುವಾರಿ ಡಿ.ಕೆ. ಶಿವಕುಮಾರ್ ಹೇಳಿದರು.
Advertisement
ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ತೆಲಂಗಾಣದಲ್ಲಿ ಕಾಂಗ್ರೆಸ್ ಪರ ವಾತಾವರಣ ಇದೆ. ಅಲ್ಲಿನ ಮುಖ್ಯಮಂತ್ರಿ ಟಿಆರ್‌ಎಸ್ ಚಂದ್ರಶೇಖರ್ ಜನರಿಗೆ ಕೊಟ್ಟ ಭರವಸೆ ಈಡೇರಿಸಿಲ್ಲ. ಇದು ನಮಗೆ ಅನುಕೂಲವಾಗಲಿದೆ ಎಂದರು. ನಾನು ನಾಯಕನಾಗಿ ಅಲ್ಲಿಗೆ ಹೋಗುತ್ತಿಲ್ಲ. ಒಬ್ಬ ಕಾರ್ಯಕರ್ತನಾಗಿ ಹೋಗುತ್ತಿದ್ದೇನೆ. ಅಲ್ಲಿನ ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ ಅವರಿಗೆ ಶಕ್ತಿ ತುಂಬಲು ಹೋಗುತ್ತಿದ್ದೇನೆ. ಈ ಬಾರಿ ಅಲ್ಲಿ ಅಧಿಕಾರ ಪಡೆಯುವ ವಿಶ್ವಾಸ ಇದೆ ಎಂದು ಹೇಳಿದರು.