Advertisement
ರಾಮನಗರದ ಹಳೇ ಬಸ್ ನಿಲ್ದಾಣದ ವೃತ್ತದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿ, ದೇಶದ ಇತಿಹಾಸದಲ್ಲೇ 14 ನಿವೇಶನ ಪಡೆದ ಮುಖ್ಯಮಂತ್ರಿ ಇದ್ದರೆ ಅದು ಸಿದ್ದರಾಮಯ್ಯ. ಸಿದ್ದರಾಮಯ್ಯ ಅವರೇ ನಿಮಗೆ ಮಾನ, ಮರ್ಯಾದೆ ಕಿಂಚಿತ್ತಾದರೂ ಇದ್ದರೆ ಮೊದಲು ರಾಜೀನಾಮೆ ನೀಡಿ ಎಂದು ಆಗ್ರಹಿಸಿದರು.
ನಾವು ಈ ಭ್ರಷ್ಟ ಸರ್ಕಾರವನ್ನು ಕಿತ್ತೂಗೆಯುವವರೆಗೆ ವಿರಮಿಸುವುದಿಲ್ಲ. ಮುಂದೆ ಇದೇ ಮೈತ್ರಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ. ಈ ಪಾದಯಾತ್ರೆ ಇದಕ್ಕೆ ಸಾಕ್ಷಿಯಾಗಿದ್ದು, ಈ ಪಾದಯಾತ್ರೆಯಲ್ಲಿ ಪಾಲ್ಗೊಂಡಿರುವ ಜನರೇ ಇದಕ್ಕೆ ಸಾಕ್ಷಿ. ಹಗರಣಗಳಲ್ಲೇ ಮುಳುಗಿರುವ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.