ಹೊಸದಿಲ್ಲಿ: ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪ್ರಿಯಾಂಕಾ ಗಾಂಧಿ ಅವರ ನೇತೃತ್ವದಲ್ಲಿ ಸ್ಪರ್ಧೆ ನಡೆಸಲಿದೆ ಎಂದು ಮಾಜಿ ಸಚಿವ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದರು.
ಕಾಂಗ್ರೆಸ್ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಇನ್ನೂ ನಿರ್ಧರಿಸಿಲ್ಲ ಆದರೆ ಉತ್ತರ ಪ್ರದೇಶದ ಎಲ್ಲಾ 403 ವಿಧಾನಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಸಲ್ಮಾನ್ ಖುರ್ಷಿದ್ ಹೇಳಿದರು.
ಇದನ್ನೂ ಓದಿ:ಜಿಲ್ಲೆಯಲ್ಲಿ ನಾಲ್ಕೂವರೆ ಲಕ್ಷ ಮಂದಿಯಷ್ಟೇ ಲಸಿಕೆ ಪಡೆಯಲು ಬಾಕಿ!
ನಾವು ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ನಮ್ಮ ಕಾರ್ಯಕರ್ತರು ಪ್ರತಿಯೊಂದು ಕ್ಷೇತ್ರಕ್ಕೂ ಹೋಗಿ ಅಲ್ಲಿನ ಸ್ಥಳೀಯ ಜನರ ಸಮಸ್ಯೆಗಳನ್ನು ಆಲಿಸಲಿದ್ದಾರೆ ಎಂದು ಸಲ್ಮಾನ್ ಖುರ್ಷೀದ್ ಹೇಳಿದರು.
ಚುನಾವಣೆ ಪ್ರಣಾಳಿಕೆಯ ಬಗ್ಗೆ ಮಾಹಿತಿ ನೀಡಿದ ಸಲ್ಮಾನ್ ಖುರ್ಷಿದ್, ಉತ್ತರ ಪ್ರದೇಶ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆಯನ್ನು ತಜ್ಞರ ಶಿಫಾರಸಿನ ಮೇರೆಗೆ ತಯಾರಿಸಲಾಗುವುದಿಲ್ಲ. ಇದು ಸ್ಥಳೀಯ ಜನರ ಸಾಮಾನ್ಯ ಸಮಸ್ಯೆಗಳನ್ನು ಒಳಗೊಂಡಿರುತ್ತದೆ. ಈ ಪ್ರಣಾಳಿಕೆ ತಮ್ಮದೇ ಎಂದು ಅವರು ಹೇಳಬಹುದು” ಎಂದು ಹೇಳಿದರು.